ಸಿದ್ದರಾಮಯ್ಯ ಈವರೆಗೆ 7 ಬಾರಿ ಪಕ್ಷ ಬದಲಿಸಿದ್ದಾರೆ: ಪ್ರಮೋದ್ ಮಧ್ವರಾಜ್ ತಿರುಗೇಟು
ಉಡುಪಿ: ಸಿದ್ದರಾಮಯ್ಯ ಈವರೆಗೆ 7 ಬಾರಿ ಪಕ್ಷವನ್ನು ಬದಲಿಸಿದ್ದಾರೆ, ಆದರೆ ನಾನು ಹುಟ್ಟಿನಿಂದಲೂ ಕಾಂಗ್ರೆಸ್ ನಲ್ಲಿದ್ದು, ಈಗ ಪಕ್ಷ ಬದಲಿಸಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.
ಪ್ರಜಾಧ್ವನಿಯಲ್ಲಿ ಪ್ರಮೋದ್ ಮಧ್ವರಾಜ್ ಅವರನ್ನು ಟೀಕಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಪ್ರಮೋದ್ ಮಧ್ವರಾಜ್ ಉಡುಪಿಯಲ್ಲಿಂದು ತಿರುಗೇಟು ನೀಡಿದರು.
ಸಿದ್ದರಾಮಯ್ಯ 1978 ರಲ್ಲಿ ರೈತಸಂಘದಲ್ಲಿದ್ದರು. 1983 ರಲ್ಲಿ ಭಾರತೀಯ ಲೋಕದಳ, ಸಮಾಜಪಕ್ಷ ಜನತಾದಳ, ಜಾತ್ಯಾತೀತ ಜನತಾದಳ, ಅಹಿಂದ ಸೇರಿಕೊಂಡರು. ಸಿದ್ದರಾಮಯ್ಯ ಅಶಿಸ್ತಿನ ವಾತಾವರಣ ಸೃಷ್ಟಿ ಮಾಡಿ ವಜಾವಾಗಿದ್ದರು ಎಂದರು.
ಪಕ್ಷಾಂತರವನ್ನು ವಿರೋಧಿಸುವುದೇ ಆದರೆ, ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ಬರಬೇಡಿ ಎಂದು ಘೋಷಿಸಿ ಎಂದು ಪ್ರಮೋದ್ ಇದೇ ವೇಳೆ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಗೆ ಸವಾಲು ಎಸೆದರಲ್ಲದೇ, ಪಕ್ಷಾಂತರವು ಸನ್ನಿವೇಶಕ್ಕೆ ಅನುಗುಣವಾಗಿ ದೇಶದಲ್ಲಿ ಸಾಮಾನ್ಯವಾಗಿದೆ ಎಂದರು.
ನನ್ನನ್ನು ಅಸಾಮಿ, ಗಿರಾಗಿ ಅಂತ ಹೇಳಿದ್ದಾರೆ. ನಾನು ಸಿದ್ದರಾಮಯ್ಯ ಕ್ಯಾಬಿನೆಟ್ ನಲ್ಲಿ ಮಂತ್ರಿಯಾಗಿದ್ದೆ, ಜನಸಾಮಾನ್ಯರ ಬಗ್ಗೆ ಸಿದ್ದರಾಮಯ್ಯ ಹೇಗೆ ಮಾತನಾಡಬಹುದು? ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ವಿರುದ್ಧ ಕೆಟ್ಟದಾಗಿ ಮಾತನಾಡಲು ಎಲ್ಲರಿಗೂ ಬರುತ್ತದೆ, ಆದರೆ ನನಗೆ ತಂದೆ, ತಾಯಿ ಸಂಸ್ಕಾರ, ಸೌಜನ್ಯತೆ ಕಲಿಸಿದ್ದಾರೆ ಎಂದು ತಿರುಗೇಟು ನೀಡಿದರು.
ಉಡುಪಿ, ಚಿಕ್ಕಮಗಳೂರು, ಉ.ಕನ್ನಡ ಮೈತ್ರಿ ಸೀಟ್ ಆಗಿತ್ತು. ಸಿದ್ದರಾಮಯ್ಯ ಮೈಸೂರು ಕ್ಷೇತ್ರ ಉಳಿಸಲು ಸ್ವಾರ್ಥ ಸಾಧನೆ ಮಾಡಿದರು. ಜೆಡಿಎಸ್ ನಲ್ಲಿ ಟಿಕೆಟ್ ಪಡೆಯೋ ಮೊದಲು ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಪರವಾನಿಗೆ ಪಡೆದಿದ್ದೇನೆ. ಸಿದ್ದರಾಮಯ್ಯ ಅವರ ಸುಳ್ಳಿನ ಬಗ್ಗೆ ಆಕ್ಷೇಪ ಇದೆ ಖಂಡಿಸುತ್ತೇನೆ, ಜೆಡಿಎಸ್ ನಿಂದ ಹಣ ಪಡೆದಿದ್ದಾನೆ ಎಂದು ಆರೋಪಿಸಿದ್ದಾರೆ, ಆದರೆ ಜೆಡಿಎಸ್ ನಿಂದ ಬಂದ ಫಂಡನ್ನು ಜಿಲ್ಲಾ ಕಾಂಗ್ರೆಸ್ ಪಡೆದಿದೆ, ಎಲ್ಲಾ ಹಂಚಿಕೆ ಮಾಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.
ಅವಕಾಶಕೊಟ್ಟರೆ ಸ್ಪರ್ಧಿಸುತ್ತೇನೆ:
ಪಕ್ಷ ಅವಕಾಶ ಕೊಟ್ಟರೆ ಜನಸೇವೆ ಮಾಡುತ್ತೇನೆ, ಅವಕಾಶ ಸಿಗದಿದ್ದರೆ, ಪಕ್ಷದ ಸೇವೆ ಮಾಡುತ್ತೇನೆ, ನಾನು ಯಾವುದೇ ಷರತ್ತು ಹಾಕಿ ಬಿಜೆಪಿಗೆ ಬಂದಿಲ್ಲ, ಪಕ್ಷ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ. ಅವಕಾಶ ಸಿಗದಿದ್ದರೆ ಬಿಜೆಪಿ ಅಭ್ಯರ್ಥಿಗಳ ಪರ ಕೆಲಸ ಮಾಡುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.
ಮೋದಿಯನ್ನು ಹೊಗಳದೆ ಇನ್ಯಾರನ್ನು ಹೊಗಳಲಿ?:
ಮೋದಿಯನ್ನು ಇಡೀ ದೇಶ ಹೊಗಳುವಾಗ ನಾನು ಹೊಗಳದೆ ಇರುವುದು ಮೂರ್ಖತನ, ಮೋದಿಯನ್ನು ಹೊಗಳದೆ ಇನ್ಯಾರನ್ನು ಹೊಗಳಲಿ, ಇದೇ ರೀತಿ ಮೋದಿಯನ್ನು ಟೀಕಿಸಿದರೆ ಸಿಗುವ ನಾಲ್ಕು ಓಟು ಸಿಗಲ್ಲ ಎಂದು ಸಿದ್ದರಾಮಯ್ಯ ಡಿಕೆಶಿಗೆ ಪುಕ್ಸಟ್ಟೆ ಸಲಹೆ ಕೊಡುತ್ತೇನೆ ಎಂದ ಪ್ರಮೋದ್ ಮಧ್ವರಾಜ್, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬ ಭ್ರಮೆಯಲ್ಲಿದೆ. ಬಿಜೆಪಿ ಈ ಬಾರಿ 150 ಸ್ಥಾನ ಗೆಲ್ಲುತ್ತದೆ ಸಂಪೂರ್ಣ ಬಹುಮತ ಬರಲಿದೆ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw