ಬೇನಾಮಿ ಆಸ್ತಿ: ಪ್ರಭಾವಿ ಸಚಿವನ ವಿರುದ್ಧ ಪ್ರಮೋದ್ ಮುತಾಲಿಕ್ ಲೋಕಾಯುಕ್ತಕ್ಕೆ ದೂರು
ಉಡುಪಿ: ಹೆಬ್ರಿ ತಾಲೂಕಿನ ಶಿವಪುರ ಗ್ರಾಮದಲ್ಲಿ ಬೇನಾಮಿ ಆಸ್ತಿ ಖರೀದಿಗೆ ಸಂಬಂಧಿಸಿ ತನಿಖೆ ನಡೆಸುವಂತೆ ಒತ್ತಾಯಿಸಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇಂದು ಉಡುಪಿ ಲೋಕಾಯುಕ್ತ ಉಡುಪಿ ವಿಭಾಗ ಡಿವೈಎಸ್ಪಿ ಪ್ರಕಾಶ್ ಕೆ.ಸಿ. ಅವರಿಗೆ ದೂರು ಸಲ್ಲಿಸಿದರು.
ಶಿವಪುರ ಗ್ರಾಮದಲ್ಲಿ ಗಜಾನನ ಮತ್ತು ವಿದ್ಯಾ ಸುವರ್ಣ ಎಂಬವರ ಹೆಸರಿನಲ್ಲಿ 67.94 ಎಕರೆ ಜಾಗವನ್ನು 4.15ಕೋಟಿ ರೂ.ಗೆ ಖರೀದಿ ಮಾಡಿದ್ದು, ಇವರಿಗೆ ಯಾವುದೇ ಆದಾಯದ ಮೂಲ ಇಲ್ಲ. ಇವರು ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಾಗಿದ್ದು, ಇದರ ಹಿಂದೆ ಪ್ರಭಾವಿ ಸಚಿವರ ಕೈವಾಡದ ಶಂಕೆ ಇದೆ ಎಂದು ಪ್ರಮೋದ್ ಮುತಾಲಿಕ್ ಆರೋಪಿಸಿದರು.
ವ್ಯವಸ್ಥಿತವಾಗಿ 53 ರೈತರಿಗೆ ಮೋಸ ಮಾಡಿ ಬಲತ್ಕಾರವಾಗಿ ಕಡಿಮೆ ಬೆಲೆಯಲ್ಲಿ ಭೂಮಿ ಖರೀದಿ ಮಾಡಲಾಗಿದೆ. ಈಗ ಅದೇ ಜಾಗವನ್ನು ಕೈಗಾರಿಕಾ ವಲಯ ಎಂಬುದಾಗಿ ಘೋಷಣೆ ಮಾಡಿ ನಾಲ್ಕೈದು ಪಟ್ಟು ಹೆಚ್ಚು ಹಣಕ್ಕೆ ಸರಕಾರಕ್ಕೆ ಮಾರಾಟ ಮಾಡಿ ಹಣ ಪಡೆಯುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ.
ಈ ಬಗ್ಗೆ ಎರಡು ದಿನಗಳ ಹಿಂದೆ ಜಿಲ್ಲಾಧಿಕಾರಿಗೆ ಮತ್ತು ಇವತ್ತು ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದೇವೆ. ಈ ಕುರಿತು ವಾರದೊಳಗೆ ಸಂಪೂರ್ಣ ತನಿಖೆಯಾಗ ಬೇಕು ಎಂದು ಒತ್ತಾಯಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw