ಪ್ರಮೋದ್ ಮುತಾಲಿಕ್ ಗೆ ದಕ್ಷಿಣ ಕನ್ನಡ ಜಿಲ್ಲಾ ಭೇಟಿ ನಿಷೇಧ
ಮಂಗಳೂರು: ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ದಕ್ಷಿಣ ಕನ್ನಡ ಜಿಲ್ಲೆ ಭೇಟಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಿಗೆ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳು ಹಾಗೂ ಪ್ರಮೋದ್ ಮುತಾಲಿಕ್ ಅವರ ಈ ಹಿಂದಿನ ಪ್ರಚೋದನಾಕಾರಿ ಹೇಳಿಕೆಯಿಂದ ಕೋಮು ಸೌಹಾರ್ದತೆಗೆ ಉಂಟಾದ ಧಕ್ಕೆಯನ್ನು ಪರಿಗಣಿಸಿ ಅವರ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶವನ್ನು ನಿಷೇಧಿಸಲಾಗಿದೆ.
ಪೊಲೀಸ್ ಅಧೀಕ್ಷಕರು ಮಾಡಿರುವ ಮನವಿಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಈ ಆದೇಶ ಹೊರಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka