ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಗೆ ಕೋಲಾರ ಪ್ರವೇಶಕ್ಕೆ ನಿರ್ಬಂಧ!
ಕೋಲಾರ: ಕೋಲಾರದಲ್ಲಿ ದತ್ತಪೀಠಕ್ಕೆ ತೆರಳುತ್ತಿದ್ದ ಮಾಲಾಧಾರಿಗಳ ಬಸ್ ಮೇಲೆ ನಡೆದ ದಾಳಿಯನ್ನು ಖಂಡಿಸಿ ಗುರುವಾರ ಕೋಲಾರ ಬಂದ್ ಗೆ ಕರೆ ನೀಡಲಾಗಿದೆ. ಇದೇ ವೇಳೆ ಕೋಲಾರಕ್ಕೆ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಕೋಲಾರ ಪ್ರವೇಶ ನಿಷೇಧ ಹೇರಲಾಗಿದೆ.
ಪ್ರಚೋದನಾಕಾರಿ ಹೇಳಿಕೆಗಳ ಮೂಲಕ ಸಾಮಾಜಿಕ ಸಾಮರಸ್ಯ ಕೆಡಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮುತಾಲಿಕ್ ಅವರಿಗೆ ನಿಷೇಧ ಹೇರಲಾಗಿದೆ ಎಂದು ತಿಳಿದು ಬಂದಿದೆ. ಪ್ರಮೋದ್ ಮುತಾಲಿಕ್ ಕೋಲಾರ ಜಿಲ್ಲೆ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ ನೀಡಿದ್ದಾರೆ.
ನವೆಂಬರ್ 13ರಂದು ಕೋಲಾರದಿಂದ ಚಿಕ್ಕಮಗಳೂರು ದತ್ತಪೀಠಕ್ಕೆ ದತ್ತ ಮಾಲಾಧಾರಿಗಳು ಪ್ರಯಾಣಿಸುತ್ತಿದ್ದ ವೇಳೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಬಸ್ ಮೇಲೆ ಯಾರೋ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು ಎನ್ನಲಾಗಿದೆ. ಈ ವಿಚಾರಕ್ಕೆ ಇದೀಗ ಇಡೀ ಕೋಲಾರವನ್ನೇ ಬಂದ್ ಮಾಡಿಸಲಾಗಿದೆ ಎನ್ನಲಾಗುತ್ತಿದೆ.
ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಕ್ಷಿಪ್ರವಾಗಿ ಕ್ರಮವನ್ನು ಕೈಗೊಂಡು 10 ಮಂದಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದೇ ಸಮಯದಲ್ಲಿ ಘಟನೆಯನ್ನು ಮುಂದಿಟ್ಟುಕೊಂಡು ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡಿದೆ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದ್ವಿತೀಯ ಪಿಯು ಮಧ್ಯ ವಾರ್ಷಿಕ ಪರೀಕ್ಷೆ ಮುಂದೂಡಿಕೆಯಾಗುವ ಸಾಧ್ಯತೆ!
ಕಾಲುಂಗುರ, ಕಾಲ್ಗೆಜ್ಜೆ ಕಳವು ಮಾಡಲು ಮಹಿಳೆಯ ಪಾದವನ್ನೇ ಕತ್ತರಿಸಿದ ದರೋಡೆಕೋರರು!
ಮಾರಮ್ಮ, ಮಹಾಕಾಳಿಯೂ ಮಾಂಸಾಹಾರಿಗಳಲ್ಲವೇ? | ಹಂಸಲೇಖರನ್ನು ವಿಲನ್ ಮಾಡಿದ ಮಾಧ್ಯಮಗಳು
ಸಿನಿಮಾಗೆ ಪ್ರೇರಣೆಯಾದ ಪಾರ್ವತಿ ಅಮ್ಮಾಳ್ ಅವರ ಹೆಸರಿಗೆ 10 ಲಕ್ಷ ರೂ. ಠೇವಣಿ ಇಡಲಿರುವ ನಟ ಸೂರ್ಯ!
ಬೆಂಗಳೂರಿನ ಫ್ಲ್ಯಾಟ್ ನಲ್ಲಿ ಬೆಂಕಿ ಅವಘಡ | ಫ್ಲ್ಯಾಟ್ ನಿಂದ ಹೊರಗೆ ಓಡಿ ಬಂದ ನಿವಾಸಿಗಳು