ಪ್ರಪಾತಕ್ಕೆ ಉರುಳಿದ ಬಸ್: 7 ಮಂದಿ ಸಾವು, 45 ಮಂದಿಗೆ ಗಾಯ - Mahanayaka
8:21 PM Wednesday 5 - February 2025

ಪ್ರಪಾತಕ್ಕೆ ಉರುಳಿದ ಬಸ್: 7 ಮಂದಿ ಸಾವು, 45 ಮಂದಿಗೆ ಗಾಯ

accident
27/03/2022

ಅಮರಾವತಿ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬಸ್ಸೊಂದು ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ 45 ಮಂದಿ ಗಾಯಗೊಂಡ ಘಟನೆ ನಡೆದಿದೆ.

52 ಮಂದಿಯಿದ್ದ ಬಸ್‌ ಮದುವೆ ಸಮಾರಂಭಕೆ ತೆರಳುತ್ತಿತ್ತು. ತಿರುಪತಿಯಿಂದ 25 ಕಿ.ಮೀ. ದೂರದಲ್ಲಿರುವ ಭಕರಪೇಟ್ ಎಂಬಲ್ಲಿ ಬಸ್‌ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಚಾಲಕನ ಅಜಾಗರೂಕತೆಯೇ ಈ ಅವಘಡಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಗಾಯಗೊಂಡವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಘಟನೆ ಬಗ್ಗೆ ತಿರುಪತಿಯ ಪೊಲಿಸರೊಬ್ಬರು ಪ್ರತಿಕ್ರಿಯಿಸಿ, ಚಾಲಕನ ಅಜಾಗರೂಕತೆಯಿಂದ ಬಸ್ ಪ್ರಪಾತಕ್ಕೆ ಉರುಳಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾಡಾನೆ ದಾಳಿ: ಮಹಿಳೆ ಸಾವು; ಓರ್ವ ಗಂಭೀರ

ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್‌ಗೆ ಜಾಮೀನು

ಬಿರ್ಭೂಮ್ ಹಿಂಸಾಚಾರ: ಘಟನಾ ಸ್ಥಳದಲ್ಲಿ ಮತ್ತೆ 40 ಕಚ್ಚಾ ಬಾಂಬ್‌ ಗಳು ಪತ್ತೆ

ಸಿದ್ದರಾಮಯ್ಯ ಕನ್ವರ್ಟ್ ಕಾಂಗ್ರೆಸ್: ಸಚಿವ ಬಿ.ಸಿ ನಾಗೇಶ್

ಇತ್ತೀಚಿನ ಸುದ್ದಿ