ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ | ಬಿಜೆಪಿ ಸಂಸದನಿಗೂ ಗಾಯ
ಪ್ರತಾಪಗಡ: ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಪರಿಣಾಮವಾಗಿ ಸಂಸದ ಸೇರಿದಂತೆ ಹಲವಾರು ಕಾರ್ಯಕರ್ತರು ಹಾಗೂ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಪ್ರದೇಶದ ಪ್ರತಾಪ್ ಗಡದ ಸಂಗಿಪುರದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮೇಳದಲ್ಲಿ ಈ ಅನಾರೋಗ್ಯಕಾರಿ ಘಟನ ನಡೆದಿದ್ದು, ಕಾರ್ಯಕ್ರಮ ಆರಂಭಕ್ಕೂ ಮೊದಲು ಎರಡೂ ಪಕ್ಷದ ಕಾರ್ಯಕರ್ತರು ಹಿಗ್ಗಾಮುಗ್ಗಾ ಹಲ್ಲೆ ನಡೆಸಿಕೊಂಡಿದ್ದಾರೆ. ಈ ವೇಳೆ ಸಂಸದ ಸಂಗಮಲಾಲ್ ಗುಪ್ತಾ ಹಾಗೂ ಎರಡೂ ಪಕ್ಷಗಳ ಕಾರ್ಯಕರ್ತರು ಹಾಗೂ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಎರಡು ತಂಡಗಳು ಪರಸ್ಪರ ಕೈ ಹಾಗೂ ಸ್ಟಿಕ್ ಗಳಿಂದ ಥಳಿಸಿಕೊಂಡಿದ್ದು, ಇದೇ ವೇಳೆ ಕಾರುಗಳಿಗೆ ಕಲ್ಲು ತೂರಾಟ ಕೂಡ ನಡೆಸಿಕೊಂಡಿದ್ದಾರೆ. ಘಟನಾ ಸ್ಥಳವು ರಣರಂಗವಾಗಿ ಮಾರ್ಪಟ್ಟಿತು. ಮಾಹಿತಿಗಳ ಪ್ರಕಾರ ಮೊದಲು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಮುಗಿ ಬಿದ್ದು ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಘಟನೆಯ ವಿಡಿಯೋವನ್ನು ಎಸ್ ಪಿ ಮುಖಂಡ ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದು, ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಲ್ಲಿದೆ? ಸಂಸದರು ಶಾಸಕರೇ ಈ ಘರ್ಷಣೆಯ ಹೊಣೆ ಹೊರಬೇಕು ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ಚಿಕಿತ್ಸಾಲಯದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ಲೈಂಗಿಕ ಕಿರುಕುಳ: ಮಾಲಿಕ ಸಹಿತ ಮೂವರು ಅರೆಸ್ಟ್
“ಗದ್ದೆ ನೋಡಲು ಹೋಗೋಣ ಬಾ” ಎಂದು ಪತ್ನಿಯನ್ನು ಕರೆದೊಯ್ದು ಹತ್ಯೆ ಮಾಡಿದವನಿಗೆ ಜೀವಾವಧಿ ಶಿಕ್ಷೆ
ಸೆ.27ರಂದು ಭಾರತ ಬಂದ್: ಈ ಬಾರಿ ಬಂದ್ ತೀವ್ರ ರೀತಿಯಲ್ಲಿ ನಡೆಯಲಿದೆ | ಕೋಡಿಹಳ್ಳಿ ಚಂದ್ರಶೇಖರ್
ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ: 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ | ಆರೋಪಿ ಅರೆಸ್ಟ್