ಪ್ರಾರ್ಥನಾ ಮಂದಿರ ಧ್ವಂಸ ಪ್ರಕರಣ: ಇಬ್ಬರು ಆರೋಪಿಗಳಿಗೆ ಶರತ್ತುಬದ್ಧ ಜಾಮೀನು - Mahanayaka

ಪ್ರಾರ್ಥನಾ ಮಂದಿರ ಧ್ವಂಸ ಪ್ರಕರಣ: ಇಬ್ಬರು ಆರೋಪಿಗಳಿಗೆ ಶರತ್ತುಬದ್ಧ ಜಾಮೀನು

court judgement
27/02/2022

ಮಂಗಳೂರು: ಕೂಳೂರು ಸಮೀಪದ ಪಂಜಿನಮೊಗರು ಉರುಂದಾಡಿ ಗುಡ್ಡೆಯಲ್ಲಿ ಪ್ರಾರ್ಥನಾ ಮಂದಿರ ದ್ವಂಸ ಪ್ರಕರಣದ ಆರೋಪದಲ್ಲಿ ಕಾವೂರು ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇದೀಗ ಆರೋಪಿಗಳಿಗೆ ಶರತ್ತುಬದ್ದ ಜಾಮೀನು ಮಂಜೂರು ಮಾಡಲಾಗಿದೆ.


Provided by

ಬಜಪೆ ನಿವಾಸಿ ಲತೀಶ್ (25), ಕಾವೂರು ಉರುಂದಾಡಿ‌ ನಿವಾಸಿ ಧನಂಜಯ (36) ಬಂಧನಕ್ಕೊಳಗಾದ ಆರೋಪಿಗಳು. ಬಂಧಿತರ ಜಾಮೀನು ಅರ್ಜಿ ಸ್ವೀಕರಿಸಿದ ಮಂಗಳೂರಿನ 3 ನೇ ಜೆಎಂಎಫ್‌ಸಿ ನ್ಯಾಯಾಲಯ ವಕೀಲರ ವಾದ-ಪ್ರತಿವಾದಗಳನ್ನು ಆಲಿಸಿ ಶರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ಮಂಗಳೂರಿನ ವಕೀಲರಾದ ಶ್ರೇಯಸ್.ಎಸ್.ಕೆ ಮತ್ತು ಹರ್ಷಿತ್ ಎ.ಎಸ್. ವಾದಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ವೇಳೆ ವ್ಯಕ್ತಿ ಸಾವು: ಇಬ್ಬರ ಬಂಧನ

ಮನೆಯಲ್ಲಿ ಸಣ್ಣ ಫಿರಂಗಿ ಸ್ಫೋಟ: ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

ದಲಿತರು ಮಾಡಿ‌ ಕೊಟ್ಟ ಕಬ್ಬಿನ ಹಾಲು ಕುಡಿಯಬೇಕೆ..? ಎಂದು ಪ್ರಶ್ನಿಸಿ ಕಬ್ಬಿನ ಅಂಗಡಿ ಧ್ವಂಸ, ಹಲ್ಲೆ

ಬ್ಯಾಂಕ್ ಆಫ್ ಬರೋಡಾ ಅಪ್ಲಿಕೇಶನ್ ಇನ್ ಸ್ಟಾಲ್ ಮಾಡಿಕೊಳ್ಳಿ ಈ ಲಾಭಗಳನ್ನು ಪಡೆಯಿರಿ

ಉಕ್ರೇನ್‌ ನ ಗ್ಯಾಸ್‌ ಪೈಪ್‌ ಲೈನ್‌ ಸ್ಫೋಟಿಸಿದ ರಷ್ಯಾ

 

ಇತ್ತೀಚಿನ ಸುದ್ದಿ