ಸಂಸದ ಪ್ರತಾಪ್ ಸಿಂಹ ಅವರ ಕಚೇರಿ ಮುಂದೆ ಬಳೆ ಇಟ್ಟು, ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ - Mahanayaka
6:17 PM Wednesday 5 - February 2025

ಸಂಸದ ಪ್ರತಾಪ್ ಸಿಂಹ ಅವರ ಕಚೇರಿ ಮುಂದೆ ಬಳೆ ಇಟ್ಟು, ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

youth congress
12/09/2021

ಮೈಸೂರು: ಮೈಸೂರು ದೇಗುಲ ತೆರವು ವಿಚಾರವಾಗಿ ಪ್ರತಾಪ್ ಸಿಂಹ  ಮಸೀದಿ, ದರ್ಗಾಗಳ ಬಗ್ಗೆ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯಿಸಿ, “ನಾವೇನೂ ಬಳೆ ತೊಟ್ಟಿಲ್ಲ” ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ, “ಮಹಿಳೆಯರಿಗೆ ಗೌರವ ಕೊಡುವುದನ್ನು ಕಲಿಯಿರಿ” ಎಂದು ತಿರುಗೇಟು ನೀಡಿದ್ದರು. ಈ ಹೇಳಿಕೆ, ಪ್ರತಿ ಹೇಳಿಕೆ ಕಾರ್ಯಕರ್ತರವರೆಗೂ ಮುಂದುವರಿದಿದೆ.

ಇಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಾಪ್ ಸಿಂಹ ಹೇಳಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸಂಸದ ಪ್ರತಾಪ್ ಸಿಂಹ ಅವರ ಕಚೇರಿ ಮುಂಭಾಗದಲ್ಲಿ 20 ಬಳೆಗಳನ್ನುಟ್ಟು ಪ್ರತಿಭಟಿಸಿದ್ದು, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ದೀಪಕ್ ಶಿವಣ್ಣ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದೀಪಕ್ ಶಿವಣ್ಣ, ಶಾಸಕ ತನ್ವೀರ್ ಸೇಠ್ ಸೇರಿದಂತೆ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ಕೊರೊನಾ ಸಂಕಷ್ಟದಲ್ಲಿ ಜನ ಸಾಯುತ್ತಿರುವಾಗ ನಿಮಗೆ ಕೋಮುವಾದ ಬೇಕಾ? ಎಂದು ಪ್ರಶ್ನಿಸಿದರು.

ಹೆಣ್ಣಿಗೆ ಗೌರವ ಕೊಡುವುದನ್ನು ನಾವು ನಿಮ್ಮಿಂದ ಕಲಿಯಬೇಕಾಗಿಲ್ಲ. ಮೈಸೂರಿನ ಜನ ನಿಮ್ಮ ರಾಸಲೀಲೆಗಳನ್ನು ನೋಡಿದ್ದಾರೆ. ನೀವು ಏನೆಂಬುವುದು ಜನರಿಗೆ ಗೊತ್ತಿದೆ ಎಂದು ದೀಪಕ್ ತಿರುಗೇಟು ನೀಡಿದರು.

ಇನ್ನಷ್ಟು ಸುದ್ದಿಗಳು…

ಬಿರಿಯಾನಿ ತಿಂದ ಕೆಲವೇ ಹೊತ್ತಿನಲ್ಲಿ ಬಾಲಕಿ ಸಾವು: 15 ದಿನಗಳ ಹಳೆಯ ಕೋಳಿ ಮಾಂಸದಲ್ಲಿ ಬಿರಿಯಾನಿ ತಯಾರಿಕೆ!

ಮುಂಬೈ: ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ!

ಕೇವಲ ಐದು ರೂಪಾಯಿಗಾಗಿ ಬುಡಕಟ್ಟು ಸಮುದಾಯದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ಮಮತಾ ಬ್ಯಾನರ್ಜಿಯ ಸಾಧನೆಯನ್ನು ತನ್ನ ಸಾಧನೆ ಎಂದು ಜಾಹೀರಾತು ನೀಡಿದ ಯೋಗಿ ಆದಿತ್ಯನಾಥ್

ಗಣೇಶೋತ್ಸವದ ಸಂಭ್ರಮದಲ್ಲಿ ಡಾನ್ಸ್ ಮಾಡುತ್ತಲೇ ಪ್ರಾಣ ಬಿಟ್ಟ ಯುವಕ!

ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಹೆಸರು ಅಧಿಕೃತ ಘೋಷಣೆ

ಹಾಡಹಗಲೇ ಕಾರಿನಲ್ಲಿ ಬಂದ ತಂಡದಿಂದ ಮಹಿಳೆಯನ್ನು ದೋಚಲು ಯತ್ನ: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋದ ಅಸಲಿಯತ್ತೇನು?

ಸಿಗರೇಟ್ ನ ಕಪಿ ಮುಷ್ಠಿಯಲ್ಲಿ ಸಿಲುಕಿ ಒದ್ದಾಡಿ ಬಿಟ್ಟಿದ್ದೆ | ಮರೆಯಲಾರದ ಘಟನೆ

ಇತ್ತೀಚಿನ ಸುದ್ದಿ