ಕ್ಷಮೆ ಕೇಳದಿದ್ದರೆ ಪ್ರತಾಪ್ ಸಿಂಹಗೆ ಚಡ್ಡಿ ಬಿಚ್ಚಿ ಚಪ್ಪಲಿಯಲ್ಲಿ ಹೊಡೆಯುತ್ತೇವೆ | ಸ್ವಾಮೀಜಿ ಎಚ್ಚರಿಕೆ - Mahanayaka
1:01 AM Wednesday 11 - December 2024

ಕ್ಷಮೆ ಕೇಳದಿದ್ದರೆ ಪ್ರತಾಪ್ ಸಿಂಹಗೆ ಚಡ್ಡಿ ಬಿಚ್ಚಿ ಚಪ್ಪಲಿಯಲ್ಲಿ ಹೊಡೆಯುತ್ತೇವೆ | ಸ್ವಾಮೀಜಿ ಎಚ್ಚರಿಕೆ

prathap simha
21/11/2021

ಕಲಬುರ್ಗಿ:  ಪ್ರಿಯಾಂಕ್ ಖರ್ಗೆ ವಿರುದ್ಧ ಸರಿಯಾಗಿ ತಿಳಿದುಕೊಳ್ಳದೇ ಮಾತನಾಡಿದ ಸಂಸದ ಪ್ರತಾಪ್ ಸಿಂಹ 15 ದಿನದೊಳಗೆ ಕ್ಷಮೆ ಕೇಳದಿದ್ದರೆ, ಅವರ ಮನೆಗೆ ಹೋಗಿ ಚಡ್ಡಿ ಬಿಚ್ಚಿ ಚಪ್ಪಲಿಯಲ್ಲಿ ಹೊಡೆಯುತ್ತೇವೆ ಎಂದು ಸುಲಫಲ ಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಪ್ರಿಯಾಂಕ್ ಖರ್ಗೆ ವಿರುದ್ಧ ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಅವಹೇಳನಾಕಾರಿ ಹೇಳಿಕೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ರ್ಯಾಲಿಯಲ್ಲಿ ಮಾತನಾಡಿದ ಅವರು, ದಲಿತರ ಬಗ್ಗೆ ಮಾತನಾಡುವಾಗ ನಿಮ್ಮ ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಳ್ಳಬೇಕು. ನಾನು ಹೇಳುತ್ತಿರುವ ಮಾತು ಆವೇಶದ ಮಾತಲ್ಲ. ಸಾವಿರಾರು ವರ್ಷಗಳ ನೋವು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಅಂಬೇಡ್ಕರ್ ಅವರ ಕುಡಿಗಳ ಬಗ್ಗೆ ಮಾತನಾಡುವಾಗ ಎಚ್ಚರವಿರಲಿ. 15 ದಿನಗಳ ಗಡುವು ಕೊಡುತ್ತೇವೆ. ನಿಮ್ಮ ಹೇಳಿಕೆ ಪಶ್ಚಾತಾಪಪಟ್ಟು ಕ್ಷಮೆ ಕೇಳಿ ಇಲ್ಲವಾದರೆ, ಮೈಸೂರಿನ ನಿಮ್ಮ ಮನೆಗೆ ಬಂದ ಚಡ್ಡಿ ಬಿಚ್ಚಿ ಚಪ್ಪಲಿಯಲ್ಲಿ ಹೊಡೆಯುತ್ತೇವೆ ಎಂದು ಸ್ವಾಮೀಜಿ ಎಚ್ಚರಿಕೆ ನೀಡಿದರು.

ಸಮಾಜ ಸದ್ಯ ‘ಪ್ರಚೋದನೆಗೆ ತಕ್ಕ ಪ್ರತಿಕ್ರಿಯೆ’ ಎಂಬಂತೆ ಸಾಗುತ್ತಿರುವುದು ಆತಂಕವನ್ನುಂಟು ಮಾಡಿದೆ. ವಿವಾದಾತ್ಮಕ ಹೇಳಿಕೆಗಳಿಗೆ ವಿವಾದಾತ್ಮಕ ಉತ್ತರ ಕೂಡ ಬರುತ್ತಿದ್ದು, ಯಾರು ಸರಿ? ಯಾರು ತಪ್ಪು ಎನ್ನುವುದೇ ಜನರಿಗೆ ಪ್ರಶ್ನೆಯಾಗಿ ಪರಿಣಮಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಿತ್ತಲೆ ಮಾರುವಾಗ ಇಂಗ್ಲಿಷ್ ನಲ್ಲಿ ಪ್ರಶ್ನೆ ಕೇಳಿದಾಗ ಶಾಲೆ ನಿರ್ಮಿಸಬೇಕು ಅನ್ನಿಸಿತು: ಹರೇಹಳ ಹಾಜಬ್ಬ

ಒಂದೋ ಜೈಲಿಗಟ್ಟಿ ಇಲ್ಲವೇ, ಹುಚ್ಚಾಸ್ಪತ್ರೆಗೆ ಸೇರಿಸಿ: ಕಂಗನಾ ವಿರುದ್ಧ ಸಿಡಿದೆದ್ದ ಸಿಖ್ಖರು

ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವಕನ ಮುಖಕ್ಕೆ ಆ್ಯಸಿಡ್ ಎರಚಿದ ಮಹಿಳೆ

ಬಾಕಿ ಕೂಲಿ ಕೇಳಿದ್ದಕ್ಕೆ ಕಾರ್ಮಿಕನ ಕೈಯನ್ನೇ ಕತ್ತರಿಸಿದ ಪಾಪಿಗಳು!

ಆಡು ಕಳ್ಳರನ್ನು ಹಿಡಿಯಲು ಹೋದ ಪೊಲೀಸ್ ಅಧಿಕಾರಿಯನ್ನು ಕೊಚ್ಚಿ ಹಾಕಿದ ಕಳ್ಳರ ಗ್ಯಾಂಗ್

ಕೋಲಾರ ಎಪಿಎಂಸಿಯಲ್ಲಿ 1 ಕೆ.ಜಿ.ಗೆ 125 ರೂ.ಗೆ ಮಾರಾಟವಾದ ಟೊಮೆಟೋ

ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಗೆ ಕೋಲಾರ ಪ್ರವೇಶಕ್ಕೆ ನಿರ್ಬಂಧ!

ಇತ್ತೀಚಿನ ಸುದ್ದಿ