ಪ್ರತಿಭಟನಾ ನಿರತ ಹಿಂದೂ ಕಾರ್ಯಕರ್ತರ ಮೇಲೆ ಜೇನು ದಾಳಿ - Mahanayaka
2:54 PM Thursday 12 - December 2024

ಪ್ರತಿಭಟನಾ ನಿರತ ಹಿಂದೂ ಕಾರ್ಯಕರ್ತರ ಮೇಲೆ ಜೇನು ದಾಳಿ

shivamogga
07/03/2022

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಹಿಂದೂ ಕಾರ್ಯಕರ್ತರ ಮೇಲೆ ಜೇನು ದಾಳಿ ನಡೆಸಿರುವ ಘಟನೆ ನಡೆದಿದೆ.

ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಬೃಹತ್​ ಪ್ರತಿಭಟನೆ ನಡೆಸಿ, ಹರ್ಷ ಕೊಲೆಯ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ಕೊಲೆ ಹಿಂದಿರುವ ರಾಷ್ಟ್ರವಿರೋಧಿ ಶಕ್ತಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಈ ವೇಳೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಗೂಡು ಕಟ್ಟಿದ್ದ ಜೇನುನೋಣಗಳು ಇದ್ದಕ್ಕಿದ್ದಂತೆ ಎದ್ದಿದ್ದು, ಪ್ರತಿಭಟನಾಕಾರರ ಮೇಲೆ ದಾಳಿ ನಡೆಸಿವೆ. ಬೃಹತ್​ ಪ್ರತಿಭಟನೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್​ ಮಾಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಎನ್‌ ಎಸ್‌ ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಬಂಧನ

ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

ಭಾರತದ ಪ್ಯಾಲೆಸ್ಟೈನ್​​​ ರಾಯಭಾರಿ ಮುಕುಲ್ ಆರ್ಯ ನಿಗೂಢ ಸಾವು

ವ್ಲಾಡಿಮಿರ್‌ ಪುಟಿನ್‌ ತೆಗೆದುಕೊಳ್ಳುವ ಮುಂದಿನ ನಿರ್ಧಾರವೇನು? | ಯುದ್ಧ ಮತ್ತೆ ಆರಂಭವಾಗುತ್ತಾ?

ಟೀಚರ್ ವಿರುದ್ಧ ದೂರು ಕೊಡಲು ಪೊಲೀಸ್ ಠಾಣೆಗೆ ಬಂದ 2ನೇ ತರಗತಿಯ ವಿದ್ಯಾರ್ಥಿ

 

ಇತ್ತೀಚಿನ ಸುದ್ದಿ