ಪ್ರತಿಭಟನೆ ಅವರ ಹಕ್ಕು, ಶಾಂತಿಯುತವಾಗಿ ಮಾಡಿಕೊಳ್ಳಲಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ಬೆಂಗಳೂರು: ಹಿಜಾಬ್ ಕುರಿತಾಗಿ ಹೈಕೋರ್ಟ್ ನೀಡಿದ ತೀರ್ಪು ಹಿಜಾಬ್ ಪರವಿರುವವರಿಗೆ ಅಸಮಾಧಾನ ತಂದಿದೆ. ಆದ್ದರಿಂದ ಅವರು ಬಂದ್ ಮಾಡುತ್ತಿದ್ದಾರೆ. ಬಂದ್, ಪ್ರತಿಭಟನೆ ಮಾಡುವುದು ಅವರ ಹಕ್ಕು, ಶಾಂತಿಯುತವಾಗಿ ಮಾಡಿಕೊಳ್ಳಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ಆದೇಶ ಧಿಕ್ಕರಿಸುತ್ತೇವೆ ಎಂದು ಅವರು ಹೇಳಿಲ್ಲ. ಅವರಿಗೆ ತೀರ್ಪಿನ ಬಗ್ಗೆ ಅಸಮಾಧಾನ ಇದೆ. ಹಾಗಾಗಿ ಶಾಂತಿಯುತ ಬಂದ್ ಆಚರಿಸುತ್ತೇವೆ ಎಂದಿದ್ದಾರೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಎಲ್ಲರಿಗೂ ಅವಕಾಶ ಇದೆ ಎಂದರು.
ಇದೇ ವೇಳೆ ಅವರು, ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಬೇಕೆಂದು ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಎಲ್ಲರೂ ಈ ಚಿತ್ರವನ್ನು ನೋಡಬೇಕು. ಪುನೀತ್ ಹೆಸರನ್ನು ಸರಕಾರ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸ್ಸು ಮಾಡಬೇಕು ಎಂದು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಟ್ಟೆ ತೆಗೆದರೆ ಮಾತ್ರ ಅತ್ಯಾಚಾರ ಎನ್ನಲು ಸಾಧ್ಯವಿಲ್ಲ: ಮೇಘಾಲಯ ಹೈಕೋರ್ಟ್
ಜಪಾನ್ ನಲ್ಲಿ ಭಾರೀ ಭೂಕಂಪ: ನಾಲ್ವರ ಸಾವು, 90 ಮಂದಿಗೆ ಗಾಯ
ಹಿಜಾಬ್ ಗೆ ಅವಕಾಶ ಕೋರಿ ಕರ್ನಾಟಕ ಬಂದ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ
ಅಪ್ರಾಪ್ತ ಇಬ್ಬರು ಸಹೋದರಿಯರ ಮೃತದೇಹ ಬಾವಿಯಲ್ಲಿ ಪತ್ತೆ : ಕೊಲೆ ಶಂಕೆ
ಪ್ರಧಾನಿ ಮೋದಿ ಅವರ ವಿದೇಶಾಂಗ ನೀತಿ ಡೊಂಕಾಗುತ್ತಿದೆ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯ