ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದ ಡಿಸಿಪಿಯ ಕಾಲಿನ ಮೇಲೆ ಹರಿದ ಕಾರು!
ಬೆಂಗಳೂರು: ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದ ವೇಳೆ ಕಾರೊಂದು ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾ ಅವರ ಕಾಲಿನ ಮೇಲೆ ಹರಿದ ಘಟನೆ ಬೆಂಗಳೂರು ನಗರದ ಗೊರಗುಂಟೆಪಾಳ್ಯ ಬಳಿ ನಡೆದಿದ್ದು, ಪರಿಣಾಮವಾಗಿ ಅವರು ಗಾಯಗೊಂಡಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೂ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ವೇಳೆ ಪ್ರತಿಭಾಟನಾ ನಿರತರನ್ನ ತಡೆಯುವ ವೇಳೆ ಕಾರೊಂದು ರಸ್ತೆ ಬದಿ ನಿಂತಿದ್ದ ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾರ ಕಾಲ ಮೇಲೆ ಏರಿದೆ.
ಈ ವೇಳೆ ತಕ್ಷಣ ಎಚ್ಚೆತ್ತ ಇತರ ಸಿಬ್ಬಂದಿ ಕಾರು ನಿಲ್ಲಿಸಿದ್ದಾರೆ. ಬಳಿಕ ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾರ ಕಾಲ ಮೇಲೆ ಕಾರು ಏರಿದ ಪರಿಣಾಮ ಅವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಆದರೆ ಅವರು ಸಂಭವಿಸಬಹುದಿದ್ದ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ತನ್ನ ಸಹೋದ್ಯೋಗಿ ಮಹಿಳೆಯ ಮೇಲೆಯೇ ಅತ್ಯಾಚಾರ ನಡೆಸಿದ ವಾಯುಪಡೆಯ ಅಧಿಕಾರಿ!
ಬಿಜೆಪಿಯ ಅಧಿಕಾರವಧಿಯಲ್ಲಿ ಹಿಂದುತ್ವ ಅಪಾಯದ ಸ್ಥಿತಿಯಲ್ಲಿದೆ | ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೋಳಿ
ರಾಜ್ಯದಲ್ಲಿಯೂ ತಟ್ಟಿದ ಭಾರತ್ ಬಂದ್ ಬಿಸಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ತೀವ್ರ ಪ್ರತಿಭಟನೆ
ದೇಶಾದ್ಯಂತ ಬುಗಿಲೆದ್ದ ರೈತರ ಆಕ್ರೋಶ: ವಿವಿಧ ಹೆದ್ದಾರಿ ತಡೆದು ತೀವ್ರ ಪ್ರತಿಭಟನೆ
ಹಲ್ಲು ಬೆಳ್ಳಗಾಗಲು ಸುಲಭ ಪರಿಹಾರ ಏನು?
ಗೋಡೆ ಮೈಮೇಲೆ ಕುಸಿದು ಬಿದ್ದರೂ ತನ್ನ ಮಗುವಿನ ಮೈಗೆ ಸಣ್ಣ ಗೆರೆಯೂ ಬೀಳದಂತೆ ಕಾಪಾಡಿದ ತಾಯಿ | ವೈರಲ್ ವಿಡಿಯೋ