ಕಾಂಗ್ರೆಸ್ ನ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಅಪಘಾತ:  ಯುವಕ ದಾರುಣ ಸಾವು - Mahanayaka
10:10 AM Thursday 12 - December 2024

ಕಾಂಗ್ರೆಸ್ ನ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಅಪಘಾತ:  ಯುವಕ ದಾರುಣ ಸಾವು

25/02/2021

ಚಿಕ್ಕಮಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಡೆಯುತ್ತಿರುವ ಕಾಂಗ್ರೆಸ್ ನ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಯುವಕನೋರ್ವ ಅಪಘಾತದಲ್ಲಿ ಮೃತಪಟ್ಟ ಘಟನೆ  ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಬಳಿ ನಡೆದಿದೆ.

21 ವರ್ಷ ವಯಸ್ಸಿನ ಮಿಥುನ್ ಮೃತ ಯುವಕನಾಗಿದ್ದು, ಇವರು ತರೀಕೆರೆ ತಾಲೂಕಿನ ನೇರಲಕೆರೆ ಗ್ರಾಮದ ಯುವಕ ಎಂದ ತಿಳಿದು ಬಂದಿದೆ.  ಬೈಕ್ ನಲ್ಲಿ ಬರುತ್ತಿದ್ದ ವೇಳೆ ಓಮ್ನಿ ಹಾಗೂ ಬಸ್ ಹಾಗೂ ಬೈಕ್ ನಡುವೆ  ಸರಣಿ ಅಪಘಾತವಾಗಿದೆ.

ಘಟನೆಯಲ್ಲಿ ಮಿಥುನ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.  ಅಪಘಾತದಲ್ಲಿ ಯುವಕ ಮೃತಪಟ್ಟ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಕಾಂಗ್ರೆಸ್ ಈ ದಿನಪ್ರತಿಭಟನೆಯನ್ನು ಕೈ ಬಿಟ್ಟಿದೆ.

ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು  ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ