ನೋಡ ನೋಡುತ್ತಿದ್ದಂತೆಯೇ ಪ್ರವಾಹದಲ್ಲಿ ಕೊಚ್ಚಿ ಹೋದ ಸಾಲು ಸಾಲು ಅಂಗಡಿಗಳು
ಹಿಮಾಚಲದ ಕುಲುವಿನಲ್ಲಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ಅಂಗಡಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದೃಶ್ಯವನ್ನು ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ.
ಹಲವಾರ ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಅಂಗಡಿಗಳ ಸಾಲುಗಳು ಕ್ಷಣ ಮಾತ್ರದಲ್ಲಿ ಕುಸಿದುಬಿದ್ದು, ನೀರು ಪಾಲಾಗುತ್ತದೆ. ಈ ಘಟನೆಯ ದೃಶ್ಯವನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ವಿಡಿಯೋ ಮಾಡುತ್ತಿದ್ದ ವ್ಯಕ್ತಿ ಘಟನೆಯನ್ನು ಕಂಡು ಆತಂಕ ವ್ಯಕ್ತಪಡಿಸುತ್ತಿರುವ ಧ್ವನಿಯೂ ವಿಡಿಯೋದಲ್ಲಿ ದಾಖಲಾಗಿದೆ.
ಹಿಮಾಚಲದ ವಿಪತ್ತು ನಿರ್ವಹಣಾ ಇಲಾಖೆಯ ಪ್ರಕಾರ ಕುಲು ಜಿಲ್ಲೆಯಲ್ಲಿ ಮೇಘಸ್ಫೋಟದಿಂದಾಗಿ ಹತ್ತು ಅಂಗಡಿಗಳು ಮತ್ತು ಮೂರು ವಾಹನಗಳು ಕೊಚ್ಚಿಹೋಗಿವೆ. ಬೆಳಗ್ಗೆ 7.30ರ ಸುಮಾರಿಗೆ ಅಣ್ಣಿ ತಹಸಿಲ್ ನ ದೆಯುತಿ ಗ್ರಾಮ ಪಂಚಾಯಿತಿಯಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಇಲಾಖೆ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka