ಉಕ್ಕಿ ಹರಿಯುತ್ತಿದ್ದ ಪ್ರವಾಹದಲ್ಲಿ ಕೊಚ್ಚಿ ಹೋದ ಕಂದಾಯ ಅಧಿಕಾರಿಗಳು: 9 ದಿನಗಳ ನಂತರ ಮೃತದೇಹ ಪತ್ತೆ

ಮಧ್ಯಪ್ರದೇಶ: ಪಾರ್ಟಿ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಕಂದಾಯ ಅಧಿಕಾರಿಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆ ನಡೆದು 9 ದಿನಗಳ ನಂತರ ಓರ್ವ ಅಧಿಕಾರಿಯ ಶವ 350 ಕಿ.ಮೀ. ದೂರದಲ್ಲಿ ಪತ್ತೆಯಾಗಿದೆ. ತಹಶೀಲ್ದಾರ್ ನರೇಂದ್ರ ಸಿಂಗ್ ಠಾಕೂರ್ ಹಾಗೂ ಮಹೇಂದ್ರ ಸಿಂಗ್ ರಜಾಕ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ನದಿಯಲ್ಲಿ ಕೊಚ್ಚಿ ಹೋದ ದಿನವೇ ಮಹೇಂದ್ರ ಸಿಂಗ್ ಶವ ಪತ್ತೆಯಾಗಿತ್ತು. ಆದರೆ ಘಟನೆ ನಡೆದ 9 ದಿನಗಳ ಬಳಿಕ ನರೇಂದ್ರ ಸಿಂಗ್ ಮೃತದೇಹ ಪತ್ತೆಯಾಗಿದೆ.
ಆಗಸ್ಟ್ 15ರಂದು ಇಬ್ಬರೂ ಪಾರ್ಟಿ ಮುಗಿಸಿಕೊಂಡು ಇಬ್ಬರೂ ವಾಪಸ್ಸಾಗುತ್ತಿದ್ದರು. ಈ ವೇಳೆ ಉಕ್ಕಿ ಹರಿಯುತ್ತಿದ್ದ ಸಿವಾನ್ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಯ ಬಳಿಕ ಅಂತಿಮ ಸಂಸ್ಕಾರಕ್ಕಾಗಿ ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka