ಮಕ್ಕಳ ಪ್ರವಾಸದ ಬಸ್—ಕೆಎಸ್ ಆರ್ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ
ಬೆಳ್ತಂಗಡಿ; ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಮಕ್ಕಳ ಪ್ರವಾಸದ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಹಲವರು ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಸಿಂದನೂರಿನ ಶಾಲಾ ಮಕ್ಕಳ ಪ್ರವಾಸದ ಬಸ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಸರಕಾರಿ ಬಸ್ ಎದುರು ಬದುರಾಗಿ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ಎರಡೂ ಬಸ್ಸಿನ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವಾಹನದಲ್ಲಿದ್ದ ಮಕ್ಕಳು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಶೌರ್ಯ ತಂಡದವರ ನೇತೃತ್ವದಲ್ಲಿ ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka