ಚಿಕ್ಕಮಗಳೂರು: ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳನ್ನು ತಡೆದು ಸಂಘಪರಿವಾರದ ಸದಸ್ಯರಿಂದ ಹಲ್ಲೆ - Mahanayaka
10:08 AM Wednesday 24 - December 2025

ಚಿಕ್ಕಮಗಳೂರು: ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳನ್ನು ತಡೆದು ಸಂಘಪರಿವಾರದ ಸದಸ್ಯರಿಂದ ಹಲ್ಲೆ

fir
28/09/2021

ಚಿಕ್ಕಮಗಳೂರು: ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳನ್ನು ತಡೆದು ಅನೈತಿಕ ಗೂಂಡಾಗಿರಿ ನಡೆಸಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು,  ತಡವಾಗಿ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.

ಚಿಕ್ಕಮಗಳೂರು ನಗರದ ಖಾಸಗಿ ಕಾಲೇಜಿನ ಯುವಕ, ಯುವತಿಯರ ತಂಡ ಹಿರೇಕೊಳಲೆಗೆ ಪ್ರವಾಸಕ್ಕೆ ಕಾರಿನಲ್ಲಿ ತೆರಳಿದ್ದು, ಅಲ್ಲಿಂದ ಮುಳ್ಳಯ್ಯನಗಿರಿಯತ್ತ ತೆರಳುತ್ತಿದ್ದ ವೇಳೆ ಸಂಘ ಪರಿವಾರದ ಯುವಕರ ಗುಂಪು ಕಾರನ್ನು ಅಡ್ಡಗಟ್ಟಿ ವಿದ್ಯಾರ್ಥಿಗಳಿಗೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಕಾರಿನಲ್ಲಿ ಬೇರೆ ಬೇರೆ ಧರ್ಮದವರು ಜೊತೆಯಾಗಿ ಪ್ರಯಾಣಿಸಿದ್ದಾರೆ ಎನ್ನುವ ಕಾರಣಕ್ಕೆ ವಿದ್ಯಾರ್ಥಿಗಳನ್ನು ಥಳಿಸಿದ್ದಾರೆ ಎಂದು ಹೇಳಲಾಗಿದೆ. ಈ ವೇಳೆ ಕಾರಿನಲ್ಲಿದ್ದ ವಿದ್ಯಾರ್ಥಿನಿಯರು, ಇದು ತಮ್ಮ ಸ್ವಂತ ಕಾರು, ನಮ್ಮ ಸಹೋದರರೊಂದಿಗೆ ಪ್ರವಾಸಕ್ಕೆ ತೆರಳುತ್ತಿದ್ದೇವೆ ಎಂದು ಹೇಳಿದರೂ ಕೇಳದೇ ಯುವಕರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಯುವಕರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ದೂರಿನನ್ವಯ ಸಂಘಪರಿವಾರದ ಮುಖಂಡ ಸಂತೋಷ್ ಕೋಟ್ಯಾನ್ ಸೇರಿದಂತೆ ಐವರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಎಂದು ತಿಳಿದು ಬಂದಿದೆ. ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಾಪ್ ಸಂದೇಶ ಕಳುಹಿಸಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ನಾಪತ್ತೆ!

ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಅಪರಿಚಿತ ವಾಹನ | ನರ್ಸಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಸಿಪಿಐನಿಂದ ಕಾಂಗ್ರೆಸ್ ಗೆ ಹೋಗುವಾಗ ಸಿಪಿಐ ಕಚೇರಿಯ ಎಸಿಯನ್ನೂ ಕೊಂಡೊಯ್ದ ಕನ್ಹಯ್ಯಾ!

ಸ್ವಇಚ್ಛೆಯಿಂದ ಮಾತ್ರ ಮತಾಂತರವಾಗಲು ಕಾನೂನಿನಲ್ಲಿ ಅವಕಾಶವಿದೆ | ಸಿಎಂ ಬಸವರಾಜ ಬೊಮ್ಮಾಯಿ

ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಅನೈತಿಕ ಗೂಂಡಾಗಿರಿ: ಕಠಿಣ ಕಾನೂನು ಕ್ರಮಕ್ಕೆ ಡಿವೈಎಫ್ ಐ ಒತ್ತಾಯ

ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವೆ ಜೊಲ್ಲೆ ವಿರುದ್ಧ ತಿರುಗಿ ಬಿದ್ದ ಗೋಮಾತೆ | ಸಚಿವರಿಗೆ ತಿವಿಯಲು ಯತ್ನ

ಇತ್ತೀಚಿನ ಸುದ್ದಿ