ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ : ಬಿಲ್ಲವ ಸಂಘಟನೆಗಳಿಂದ ಮಾನವ ಸರಪಳಿ ರಚಿಸಿ ಮೌನ ಪ್ರತಿಭಟನೆ
ಬೆಳ್ತಂಗಡಿ : ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಆರೋಪಿಗಳನ್ನು ಕೂಡಲೇ ಬಂಧಿಸಿ, ಉಗ್ರ ಶಿಕ್ಷೆಗೆ ಒಳಡಿಸುವಂತೆ ಒತ್ತಾಯಿಸಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ, ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ, ಯುವವಾಹಿನಿ ಬೆಳ್ತಂಗಡಿ ಮತ್ತು ವೇಣೂರು ಘಟಕದ ನೇತೃತ್ವದಲ್ಲಿ ಬುಧವಾರ ಸಂಜೆ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಮೊಂಬತ್ತಿ ಬೆಳಗಿ, ಮಾನವ ಸರಪಳಿ ರಚಿಸಿ, ಮೌನ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಪ್ರಧಾನ ಕಾರ್ಯದರ್ಶಿ ಜಯವಿಕ್ರಮ ಕಲ್ಲಾಪು, ಉಪಾಧ್ಯಕ್ಷ ಶೇಖರ ಬಂಗೇರ, ಜೊತೆ ಕಾರ್ಯದರ್ಶಿ ರಾಜೀವ ಸಾಲಿಯಾನ್, ಗೆಜ್ಜೇಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಪೀತಾಂಬರ ಹೇರಾಜೆ, ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ಸುಜಿತಾ ವಿ ಬಂಗೇರ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷೆ ಸುಜಾತ ಅಣ್ಣಿ ಪೂಜಾರಿ, ವೇಣೂರು ಘಟಕದ ಅಧ್ಯಕ್ಷ ಯೋಗೀಶ್ ಬಿಕ್ರೊಟ್ಟು, ಯುವ ಬಿಲ್ಲವ ವೇದಿಕೆ ಪ್ರಧಾನ ಕಾರ್ಯದರ್ಶಿ ಸತೀಶ್ ಟಿ.ಎನ್,
ಸಂಘದ ನಿರ್ದೇಶಕರುಗಳಾದ ಜಗದೀಶ್ ಡಿ, ಯಶೋಧರ ಚಾರ್ಮಾಡಿ, ದಿನೇಶ್ ಕೋಟ್ಯಾನ್, ಲಕ್ಷ್ಮಣ ಪೂಜಾರಿ, ರಮೇಶ್ ಪೂಜಾರಿ ಪಡ್ಡಾಯಿಮಜಲ್, ರಂಜಿತ್ ಹೆಚ್. ಡಿ, , ಶಾಂಭವಿ ಬೆಳ್ತಂಗಡಿ, ಮಾಜಿ ಉಪಾಧ್ಯಕ್ಷ ಮನೋಹರ ಇಳಂತಿಲ, ಪ್ರಮುಖರಾದ ಶೈಲೇಶ್ ಕುರ್ತೋಡಿ, ಪ್ರವೀಣ್‌ಕುಮಾರ್, ಚಂದ್ರಹಾಸ ಕೇದೆ, ಎಂ.ಕೆ ಪ್ರಸಾದ್, ಹರೀಶ್ ಸುವರ್ಣ, ಅಶ್ವತ್ಥ್ ಕುಮಾರ್, ನವೀನ್ ಪಚೇರಿ, ಸುನೀಲ್ ಧರ್ಮಸ್ಥಳ, ಹರೀಶ್ ಪೊಕ್ಕಿ, ರಾಕೇಶ್ ಕುಮಾರ್ ಮೂಡುಕೋಡಿ, ಜನಾರ್ದನ ಮಾಲಾಡಿ, , ರಮಾನಂದ ಸಾಲ್ಯಾನ್ ಸೇರಿದಂತೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಯುವವಾಹಿನಿ ಬೆಳ್ತಂಗಡಿ ಹಾಗೂ ವೇಣೂರು ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka