ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳ ಬಂಧನ - Mahanayaka
6:08 PM Wednesday 11 - December 2024

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳ ಬಂಧನ

praveen
07/08/2022

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ  ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದೆ.

ಅಬೀದ್ (22) ಮತ್ತು ನೌಫಲ್ (28) ಬಂಧಿತ ಆರೋಪಿಗಳಾಗಿದ್ದು, ಕೊಲೆಗೆ ಸಂಚು ರೂಪಿಸಿದ ಆರೋಪ ಈ ಆರೋಪಿಗಳ ಮೇಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಜಿಲ್ಲೆಯಲ್ಲಿ ಭಾರೀ ಪ್ರತಿಭಟನೆಯ ಬಳಿಕ ಹಲವು ಅಹಿತಕರ ಘಟನೆಗಳು ನಡೆದಿದ್ದವು.

ರಾತ್ರಿ 9 ಗಂಟೆ ನಂತರದ ನಿರ್ಬಂಧ ತೆರವು

ಮೂರು ಕೊಲೆ ಕೃತ್ಯ ನಡೆದ ಹಿನ್ನೆಲೆಯಲ್ಲಿ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವೊಂದು ನಿರ್ಬಂಧ ಹೇರಲಾಗಿತ್ತು.  ಕೊಲೆ ಕೃತ್ಯ ಹಿನ್ನೆಲೆಯಲ್ಲಿ ವಿಧಿಸಿದ್ದ ರಾತ್ರಿ ನಿರ್ಬಂಧ ತೆರವುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ರಾತ್ರಿ 9 ಗಂಟೆಯ ಬಳಿಕ ಇದ್ದ ವ್ಯಾಪಾರ ನಿರ್ಬಂಧ ತೆರವುಗೊಳಿಸಲಾಗಿದೆ. ಅಂಗಡಿ, ವೈನ್ ಶಾಪ್, ಬಾರ್ ಎಂದಿನಂತೆ ಕಾರ್ಯಾಚರಿಸಲು ಅವಕಾಶ ಕಲ್ಪಿಸಲಾಗಿದೆ. ಜನರ ಓಡಾಟಕ್ಕೂ ಯಾವುದೇ ನಿರ್ಬಂಧ ಇಲ್ಲ. ಆದ್ರೆ ಆಗಸ್ಟ್ 14 ತನಕ 144 ಸೆಕ್ಷನ್ ಮುಂದುವರಿಕೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ

ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಆದ್ರೆ ರಾತ್ರಿ ಜನರು ಹೆಚ್ಚು ಓಡಾಟ ನಡೆಯದಂತೆ ಡಿಸಿ ಮನವಿ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ