ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಜೂನ್ 30ರೊಳಗೆ ಆರೋಪಿಗಳು ಶರಣಾಗದಿದ್ದಲ್ಲಿ ಆಸ್ತಿ ಮುಟ್ಟುಗೋಲು!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತಲೆಮರೆಸಿಕೊಂಡಿರುವ ಆರೋಪಿಗಳು ಜೂನ್ 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆ ಹಾಗೂ ಆಸ್ತಿ ಮುಟ್ಟುಗೋಲು ಮಾಡಲಾಗುವುದೆಂದು ಎನ್ ಐಎ ನ್ಯಾಯಾಲಯ ಆದೇಶ ಮಾಡಿರುವ ಬಗ್ಗೆ ವರದಿಯಾಗಿದೆ.
ಈ ಕುರಿತು ಸುಳ್ಯ ನಗರದಲ್ಲಿ ಎನ್ ಐಎ ಅಧಿಕಾರಿಗಳು ಧ್ವನಿವರ್ಧಕದ ಮೂಲಕ ಉದ್ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ.
ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಲಾಗುತ್ತಿದೆ. ತಲೆಮರೆಸಿಕೊಂಡಿರುವ ಆರೋಪಿಗಳಾದ ಉಮರ್ ಫಾರೂಕ್ ಹಾಗೂ ಮುಸ್ತಫಾ ಅವರ ಶರಣಾಗತಿಗೆ ಉದ್ಘೋಷಣೆ ಮಾಡಲಾಗುತ್ತಿದ್ದು, ಆರೋಪಿಗಳ ಮನೆಗೆ ಎನ್ ಐಎ ಅಧಿಕಾರಿಗಳು ತೆರಳಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿದ್ದಾರೆ.
ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್ ಐಎ ನ್ಯಾಯಾಲಯದ ಆದೇಶವನ್ನು ಉದ್ಘೋಷಣೆ ಮಾಡಿ ಆರೋಪಿ ಮನೆಗೆ ಹೋಗಿ ಆದೇಶ ಪ್ರತಿ ಅಂಟಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw