ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿಗೆ ಮಂಗಳೂರಲ್ಲೇ ಕೆಲಸ..?!
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸಿಎಂ ಸಚಿವಾಲಯದಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಅದರಂತೆ ಪ್ರವೀಣ್ ಅವರ ಪತ್ನಿ ನೂತನ ಕುಮಾರಿ ಎಂ. ಅವರಿಗೆ ಸಿ ಗ್ರೂಪ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದೆ. ಇದನ್ನು ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು.
ಇದೀಗ ನೇಮಕಾತಿ ಮಾಡಿ ಸರಕಾರ ಆದೇಶ ಕೂಡಾ ಬಂದಿತ್ತು. ಸದ್ಯದ ಅಪ್ಡೇಟ್ ಏನಪ್ಪ ಅಂದ್ರೆ, ಸಿಎಂರಿಂದ ಬೆಂಗಳೂರಿನ ಸಿಎಂ ಕಚೇರಿಯಲ್ಲಿ ಉದ್ಯೋಗದ ಆದೇಶ ಪಡೆದಿರುವ ಮೃತ ಪ್ರವೀಣ್ ಪತ್ನಿ ನೂತನಾ ಕುಮಾರಿ ಎಂಬುವವರು ನಿಯೋಜನೆ ಮೇರೆಗೆ ಮಂಗಳೂರಿನಲ್ಲೇ ಕೆಲಸಕ್ಕೆ ಸೇರಲಿದ್ದಾರೆ. ಡಿಸಿ ಕಚೇರಿ, ಜಿ.ಪಂ. ಅಥವಾ ಮೆಸ್ಕಾಂನಲ್ಲಿ ಉದ್ಯೋಗಕ್ಕೆ ಸೇರ್ಪಡೆಯಾಗಲಿದ್ದಾರೆ.
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ದುಷ್ಕರ್ಮಿಗಳಿಂದ ಹತ್ಯೆಗೆ ಒಳಗಾದ ಬಳಿಕ ಅವರ ಕುಟುಂಬ ದಿಕ್ಕೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬಕ್ಕೆ ಆಧಾರವಾಗಿರುವ ಪ್ರವೀಣ್‌ನ ಪತ್ನಿಗೆ ಸರ್ಕಾರಿ ಕೆಲಸ ದೊರಕಿಸಿ ಕೊಡುವಂತೆ ದ.ಕ. ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿಗಳನ್ನು ಕೋರಿದ್ದರು.
ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳಬೇಕಾಗಿರುವುದರಿಂದ ಬೆಂಗಳೂರು ಬದಲು ಮಂಗಳೂರಿನಲ್ಲೇ ನಿಯೋಜನೆ ಮೇರೆಗೆ ಸರ್ಕಾರಿ ಕೆಲಸ ನಿರ್ವಹಿಸಲು ಪ್ರವೀಣ್ ಪತ್ನಿ ನೂತನಾ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಕುರಿತ ಆದೇಶ ಪತ್ರ ಇನ್ನಷ್ಟೇ ನೂತನಾ ಅವರ ಕೈಸೇರಬೇಕಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka