ಪ್ರವೀಣ್ ನೆಟ್ಟಾರು ಪತ್ನಿಯನ್ನು ಮರುನೇಮಕ ಮಾಡಲಾಗುವುದು: ಸಿದ್ದರಾಮಯ್ಯ ಸ್ಪಷ್ಟನೆ
ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರನ್ನು ಸರ್ಕಾರ ಬದಲಾದ ಬೆನ್ನಲ್ಲೇ ಕೆಲಸದಿಂದ ವಜಾಗೊಳಿಸಲಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲದೇ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರುನೇಮಕ ಮಾಡಲಾಗುವುದು ಎಂದು ಸಿದ್ದರಾಮಯ್ಯನವರು ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw