ಪ್ರೀತಿಸಿ ವಿವಾಹವಾದ ಪತ್ನಿಗೆ ಅಕ್ರಮ ಸಂಬಂಧ | ಫೇಸ್ ಬುಕ್ ಲೈವ್ ಗೆ ಬಂದು ಪತಿ ಆತ್ಮಹತ್ಯೆ - Mahanayaka
9:18 AM Tuesday 24 - December 2024

ಪ್ರೀತಿಸಿ ವಿವಾಹವಾದ ಪತ್ನಿಗೆ ಅಕ್ರಮ ಸಂಬಂಧ | ಫೇಸ್ ಬುಕ್ ಲೈವ್ ಗೆ ಬಂದು ಪತಿ ಆತ್ಮಹತ್ಯೆ

venkatesh
25/09/2021

ವಿಜಯಪುರ: ಪ್ರೀತಿಸಿ ವಿವಾಹವಾದರೂ ತನ್ನ ಪತ್ನಿ ತನ್ನ ಸಂಬಂಧಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ ನೊಂದ ಯುವಕನೋರ್ವ ಫೇಸ್ ಬುಕ್ ಲೈವ್ ಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.

25 ವರ್ಷ ವಯಸ್ಸಿನ ವೆಂಕಟೇಶ್ ದ್ವಾರನಹಳ್ಳಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದು, ಪತ್ನಿಯು ತನ್ನ ಸಹೋದರ ಸಂಬಂಧಿಯೋರ್ವನೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಆತ ಹೇಳಿದ್ದು, ತನಗೆ ಆತನ ಜೊತೆಗೆ ಸಂಬಂಧವಿದೆ. ತಾನು ಆತನೊಂದಿಗೆ ವಾಸಿಸುವುದಾಗಿ ಆಕೆ ಹೇಳುತ್ತಿದ್ದಾಳೆ ಇದರಿಂದ ನೊಂದು ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಕಟೇಶ್ ಫೇಸ್ ಬುಕ್ ಲೈವ್ ನಲ್ಲಿ ಹೇಳಿಕೊಂಡಿದ್ದಾನೆ ಎಂದು ವರದಿಯಾಗಿದೆ.

ವೆಂಕಟೇಶ್ ಈ ವಿಡಿಯೋ ಮಾಡುತ್ತಿದ್ದಂತೆಯೇ ಆತನನ್ನು  ಆತನಿಗಾಗಿ ಸ್ನೇಹಿತರು ತೀವ್ರವಾಗಿ ಹುಡುಕಾಡಿ ಆತ್ಮಹತ್ಯೆ ನಿರ್ಧಾರದಿಂದ ತಪ್ಪಿಸಲು ಸ್ನೇಹಿತರು ಪ್ರಯತ್ನಿಸಿದ್ದಾರೆ. ಆದರೆ, ಅದಾಗಲೇ ತಡವಾಗಿದ್ದು, ವೆಂಕಟೇಶ್ ತನ್ನದೇ ಜಮೀನಿನಲ್ಲಿ ನೇಣುಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಎಗ್ ರೈಸ್, ಗೋಬಿ ಮಂಚೂರಿ ಆಸೆ ತೋರಿಸಿ ಬಾಲಕಿಯನ್ನು ಅತ್ಯಾಚಾರ ನಡೆಸಿದ್ದ ಕಾಮುಕ ಅರೆಸ್ಟ್!

ಗೋ ಕಳ್ಳತನಕ್ಕೆ ಜಾತಿ ಇಲ್ಲ, ಧರ್ಮ ಇಲ್ಲ, ಬಿಜೆಪಿಯವರೇ ಬೀಫ್ ಎಕ್ಸ್ ಪೋರ್ಟ್ ಮಾಡ್ತಿದ್ದಾರೆ | ಮಿಥುನ್ ರೈ

ಮೊಬೈಲ್ ಟವರ್ ಗೆ ಹತ್ತಿಕೊಂಡ ಬೆಂಕಿ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಕೃಷ್ಣ ಬೆಣ್ಣೆ ಕದ್ದರೆ ತುಂಟಾಟ, ಈ ಬಾಲಕ ಹಸಿವಿನಿಂದ ತಿಂಡಿ ಕದ್ದರೆ ಅಪರಾಧವೇ? | ನ್ಯಾಯಾಧೀಶರ ಪ್ರಶ್ನೆ

ಅಸ್ಪೃಶ್ಯತೆ ಅನಿಷ್ಟ ಪದ್ಧತಿ ಅದನ್ನು ತೊಲಗಿಸೋಣ | ಗ್ರಾಮಸ್ಥರಿಗೆ ಪ್ರತಿಜ್ಞೆ ಮಾಡಿಸಿದ ಪೊಲೀಸರು

ಅ.3ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ | ಬಸವರಾಜ ಬೊಮ್ಮಾಯಿ

ವಿಧಾನಮಂಡಲ ಅಧಿವೇಶನದಲ್ಲಿ  ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಬೆಂಗಳೂರಿನಲ್ಲಿ ಮತ್ತೊಂದು ಭಾರೀ ಅಗ್ನಿ ದುರಂತ | ಕೆಮಿಕಲ್ ಫ್ಯಾಕ್ಟರಿಯ ಬಾಯ್ಲರ್ ಸ್ಫೋಟ

ಇತ್ತೀಚಿನ ಸುದ್ದಿ