ಪ್ರೀತಿಸಿ ವಿವಾಹವಾಗಿದ್ದವರನ್ನು ಜಾತಿಗಾಗಿ ಬೇರ್ಪಡಿಸಿದರು! | ಫೇಸ್ ಬುಕ್ ಲೈವ್ ಗೆ ಬಂದು ಯುವಕ ಆತ್ಮಹತ್ಯೆ - Mahanayaka
9:24 PM Monday 15 - September 2025

ಪ್ರೀತಿಸಿ ವಿವಾಹವಾಗಿದ್ದವರನ್ನು ಜಾತಿಗಾಗಿ ಬೇರ್ಪಡಿಸಿದರು! | ಫೇಸ್ ಬುಕ್ ಲೈವ್ ಗೆ ಬಂದು ಯುವಕ ಆತ್ಮಹತ್ಯೆ

bheemesh nayak
08/09/2021

ರಾಯಚೂರು: ಪ್ರೀತಿಸಿ ವಿವಾಹವಾಗಿದ್ದ ಯುವತಿಯನ್ನು ತನ್ನಿಂದ ದೂರ ಮಾಡಿದರು ಎಂಬ ಬೇಸರದಿಂದ ಯುವಕನೋರ್ವ ಫೇಸ್ ಬುಕ್ ಲೈವ್ ಗೆ ಬಂದು ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರಿನ ಗಾಣದಾಳದಲ್ಲಿ ನಡೆದಿದೆ.


Provided by

ಭೀಮೇಶ್ ನಾಯಕ್ ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದು, ಈತ ಸಂಧ್ಯಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದು, ಇವರಿಬ್ಬರು ಮದುವೆಯಾಗಿದ್ದರು ಎನ್ನಲಾಗಿದೆ. ಇವರಿಬ್ಬರ ಜಾತಿ ಬೇರೆ ಬೇರೆಯಾಗಿದ್ದರಿಂದಾಗಿ ಪೋಷಕರು ಈ ಮದುವೆಯನ್ನು ಒಪ್ಪಿರಿಲ್ಲ ಎಂದು ಹೇಳಲಾಗಿದೆ. ಹೀಗಾಗಿ ಈ ಪ್ರಕರಣ ಇಡಪನೂರು ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.

ವಿಚಾರಣೆಗೆಂದು ನವದಂಪತಿಯನ್ನು ಠಾಣೆಗೆ ಕರೆದ ಪೊಲೀಸರು ಯುವತಿಯನ್ನು ಯುವಕನಿಂದ ಬೇರ್ಪಡಿಸಿ ಪೋಷಕರ ಕೈಗೊಪ್ಪಿಸಿದ್ದರು ಎಂದು ಹೇಳಲಾಗಿದೆ. ಪೊಲೀಸರು ಯಾವ ಆಧಾರದಲ್ಲಿ ಈ ಕ್ರಮಕೈಗೊಂಡರು ತಿಳಿದು ಬಂದಿಲ್ಲ.

ಈ ಘಟನೆಯಿಂದ ತೀವ್ರವಾಗಿ ನೊಂದ ಯುವಕ ಭೀಮೇಶ್ ನಾಯಕ್ ಡೆತ್ ನೋಟ್ ನಲ್ಲಿ ಇಡಪನೂರು ಪಿಎಸ್‌ ಐ, ಯುವತಿ ತಂದೆ ಚಕ್ರಪಾಣಿ ಸೇರಿದಂತೆ ಹಲವರು ತನ್ನ ಸಾವಿಗೆ ಕಾರಣ ಎಂದು ಬರೆದಿದ್ದು, ಸಾವಿಗೂ ಮೊದಲು ಫೇಸ್ ಬುಕ್ ಲೈವ್ ಗೆ ಬಂದು ನೋವು ತೋಡಿಕೊಂಡಿದ್ದಾನೆ.

ಇನ್ನಷ್ಟು ಸುದ್ದಿಗಳು…

ಡ್ರಗ್ಸ್ ಕಂಟಕ: ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಹೆಸರು? | ರೂಮ್ ಗೆ ಅನುಶ್ರೀ ಡ್ರಗ್ಸ್ ತರುತ್ತಿದ್ದಳು ಎಂದ ಕಿಶೋರ್ ಶೆಟ್ಟಿ?

ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ಪಿಎಸ್ ಐ ಅರ್ಜುನ್ ಗೆ ಜೈಲೇ ಗತಿ

ಮಹಿಳೆಯನ್ನು ಕೊಂದು ಅಡುಗೆ ಮನೆಯಲ್ಲಿಯೇ ಸುಟ್ಟ ಲಿವ್ ಇನ್ ಪಾಟ್ನರ್!

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: 7ನೇ ಆರೋಪಿ ತಮಿಳುನಾಡಿನಲ್ಲಿ ಅರೆಸ್ಟ್

ಬ್ರಾಹ್ಮಣರು ಹಾಗೂ ದಲಿತರು ಒಂದಾಗಬೇಕು | ಬಿಎಸ್ ಪಿ ವರಿಷ್ಠೆ ಮಾಯಾವತಿ ಕರೆ

ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಹೆಚ್ಚಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈಅಲಾರ್ಟ್

ಮಳೆಗಾಗಿ 6 ವರ್ಷ ವಯಸ್ಸಿನ ಬಾಲಕಿಯರನ್ನು ಬೆತ್ತಲೆ ಮೆರವಣಿಗೆ ಮಾಡಿಸಿದ ಗ್ರಾಮದ ಹಿರಿಯರು!

ಇತ್ತೀಚಿನ ಸುದ್ದಿ