ಇಂದು ಬೆಳಗಾವಿಯಲ್ಲಿ ಏಕಕಾಲಕ್ಕೆ ಪ್ರಚಾರ ನಡೆಸಲಿರುವ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ!

ಬೆಳಗಾವಿ: ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್—ಬಿಜೆಪಿ ಶಕ್ತಿ ಪ್ರದರ್ಶನವಾಗಲಿದ್ದು, ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗಾವಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಪರ ಬೆಳಗಾವಿಯಲ್ಲಿ ಚುನಾವಣಾ ಪ್ರಚಾರಕ್ಕೆ ಧುಮಕಲಿದ್ದಾರೆ.
ಏಕಕಾಲದಲ್ಲಿ ಇಬ್ಬರು ನಾಯಕರಿಂದ ತಮ್ಮ ಪಕ್ಷದ ಪರವಾಗಿ ಮತಯಾಚನೆ ನಡೆಯಲಿದೆ. ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶ ನಡೆಸಲಿದ್ದಾರೆ. ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಧಾನಿ ಮತಯಾಚನೆ ಮಾಡಲಿದ್ದಾರೆ.
ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಕೂಡ ಇಂದು ಬೆಳಗಾವಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಚಿಕ್ಕೋಡಿ ಕ್ಷೇತ್ರ ವ್ಯಾಪ್ತಿಯ ಉಗಾರ್ ಖುರ್ದ್, ಬೆಳಗಾವಿ ಕ್ಷೇತ್ರದ ಯರಗಟ್ಟಿಯಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಸಿದ್ದರಾಮಯ್ಯ ಒಂದೇ ದಿನ ಎರಡೂ ಕ್ಷೇತ್ರಗಳಲ್ಲಿ ತಲಾ ಒಂದೊಂದು ಸಮಾವೇಶ ನಡೆಸಲಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth