ಪರಿಶಿಷ್ಟ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯಿಂದಲೇ ಯುವತಿಯ ಹತ್ಯೆ!

ಮೈಸೂರು: ತನ್ನಮಗಳು ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದಳೆಂಬ ಕಾರಣಕ್ಕಾಗಿ ತಂದೆಯೇ ಮಗಳ ಕತ್ತು ಹಿಸುಕಿ ಕೊಂದು ಪೊಲೀಸರಿಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ನಡೆದಿದೆ.ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಒಕ್ಕಲಿಗ ಸಮಾಜಕ್ಕೆ ಸೇರಿದ ಸುರೇಶ್ ಹಾಗೂ ಬೇಬಿ ಅವರ ಪುತ್ರಿ ಶಾಲಿನಿ (17) ಮೃತ ಯುವತಿ,.
ಪಿರಿಯಾಪಟ್ಟಣದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದು ಬಾಲಕಿ ಇದೇ ಗ್ರಾಮದ ಸಮೀಪದ ಮೆಲ್ಲಹಳ್ಳಿ ಬೋರೆ ಗ್ರಾಮದ ಪರಿಶಿಷ್ಟ ಜನಾಂಗಕ್ಕೆ ಸೇರಿದ ಯುವಕನನ್ನು ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದಳು. ಇದಕ್ಕೆ ಒಪ್ಪದ ಶಾಲಿನಿ ಪೋಷಕರು ವಿರೋಧ ವ್ಯಕ್ತಪಡಿಸಿ ಪಟ್ಟಣದ ಪೊಲೀಸ್ ಠಾಣೆಗೆ ಯುವಕನ ವಿರುದ್ಧ ದೂರು ನೀಡಿದ್ದರು. ಆದರೆ ಯುವತಿ ಆತನನ್ನೇ ಪ್ರೀತಿಸುವುದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದಾಗ ಆಕೆಗೆ 18 ವರ್ಷ ತುಂಬಿರದ ಕಾರಣ ಪೊಲೀಸರು ಆಕೆಯನ್ನು ಮೈಸೂರಿನ ಬಾಲಮಂದಿರಕ್ಕೆ ಕಳುಹಿಸಿದ್ದರು.
ಕಳೆದ ಕೆಲವು ದಿನಗಳ ಹಿಂದೆ ಶಾಲಿನಿ ತನ್ನ ಪೋಷಕರಿಗೆ ಕರೆ ಮಾಡಿ ಇಲ್ಲಿಂದ ಕರೆದುಕೊಂಡು ಹೋಗುವಂತೆ ಹೇಳಿದಾಗ ಪೋಷಕರು ತಮ್ಮ ಮಗಳನ್ನು ಸ್ವಗ್ರಾಮಕ್ಕೆ ಕರೆತಂದಿದ್ದರು, ಸೋಮವಾರ ರಾತ್ರಿ ಬಾಲಕಿ ಮತ್ತೆ ತನ್ನ ಪೋಷಕರಿಗೆ ಪ್ರೀತಿಸುತ್ತಿದ್ದ ಹುಡುಗನೊಂದಿಗೆ ಹೋಗುವುದಾಗಿ ಹಠ ಮಾಡಿ ಇದಕ್ಕೆ ಒಪ್ಪದ ತಂದೆ ಸುರೇಶ್ ತನ್ನ ಮಗಳ ಕತ್ತು ಹಿಸುಕಿ ಕೊಲೆ ಮಾಡಿ ತನ್ನ ಪತ್ನಿ ಬೇಬಿಯೊಂದಿಗೆ ಸೇರಿ ಆಕೆ ಪ್ರೀತಿಸುತ್ತಿದ್ದ ಹುಡುಗನ ಗ್ರಾಮದ ಜಮೀನೊಂದರ ಬಳಿ ಎಸೆದು ಹೋಗಿದ್ದಾರೆ
ಸುರೇಶ್ ಮಂಗಳವಾರ ಬೆಳಿಗ್ಗೆ ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ಬಂದು ಮಗಳನ್ನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡು ಪೋಲಿಸರಿಗೆ ಶರಣಾಗಿದ್ದಾನೆ, ಆರೋಪಿತನ ಹೇಳಿಕೆ ಆಧರಿಸಿ ಪೊಲೀಸರು ಕೇಸ್ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ತರಗತಿಯಲ್ಲೇ ನಿದ್ದೆ ಹೋದ ಶಿಕ್ಷಕಿಗೆ ಬೀಸಣಿಗೆಯಲ್ಲಿ ಗಾಳಿ ಬೀಸಿದ ವಿದ್ಯಾರ್ಥಿನಿ!
ಪಠ್ಯಪುಸ್ತಕ ಪರಿಷ್ಕರಣೆ ಯಡವಟ್ಟು: ಶಿಕ್ಷಣ ಸಚಿವರಿಗೆ ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದ್ದೇನು?
ಮಂಗಳೂರು ಸೇರಿದಂತೆ ರಾಜ್ಯದ 4 ಮಹಾನಗರಗಳಲ್ಲಿ ಸಂಚಾರಿ ಲ್ಯಾಬ್, ಕ್ಲಿನಿಕ್ ಸೇವೆ