ಕೇಸರಿ ಶಾಲು ಹಾಕಿ ಬಿಜೆಪಿ ಸೇರಿದರೆ ಪಾಪಿಗಳೆಲ್ಲ ಪಾವನರಾಗುತ್ತಾರೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಬಿಜೆಪಿ ಪಕ್ಷಕ್ಕೆ ಸೇರಬೇಕು ಎಂದು ಕೊಂಡವರು ಎಷ್ಟೇ ಪಾಪಗಳನ್ನು ಮಾಡಿದ್ದರು, ಕಾನೂನಿಗೆ ವಿರುದ್ಧವಾಗಿ ಕೆಲಸಗಳನ್ನು ಮಾಡಿದ್ದರು ಸಹ ಕೇಸರಿ ಶಾಲು, ಬಿಜೆಪಿ ಶಾಲು ಹಾಕಿಕೊಂಡು ಬಿಜೆಪಿ ಸೇರಿದರೆ ಸಾಕು ಪಾಪಿಗಳೆಲ್ಲ ಪಾವನರಾಗುತ್ತಾರೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೌಡಿಶೀಟರ್ ಸೈಲೆಂಟ್ ಸುನೀಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸಿಸಿಬಿ,ಸಿಐಡಿ ಸೇರಿದಂತೆ ಇಡೀ ಗೃಹ ಇಲಾಖೆಗೆ ಬೇಕಾಗಿದ್ದ ವ್ಯಕ್ತಿ ಬಿಜೆಪಿ ಸಂಸದರ ಜೊತೆ ಪತ್ರಿಕಾಗೋಷ್ಠಿ ನಡೆಸುತ್ತಾರೆ, ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳುತ್ತಾರೆ, ಶಾಸಕರ ಜೊತೆಯಲ್ಲಿಯೇ ವೇದಿಕೆಗಳನ್ನು ಹಂಚಿಕೊಳ್ಳುತ್ತಾರೆ. ಇದರಿಂದ ಬಿಜೆಪಿ ಸರ್ಕಾರ ಸಮಾಜಕ್ಕೆ ಕೊಡುತ್ತಿರುವ ಸಂದೇಶವೇನು? ಎಂದು ಅವರು ಪ್ರಶ್ನಿಸಿದ್ದಾರೆ.
ಚುನಾವಣೆಗಾಗಿ ಜನಸ್ಪಂದನೆ ರ್ಯಾಲಿಗಳಲ್ಲಿ ಜನರ ಸ್ಪಂದನೆ ಇಲ್ಲದೆ ಖಾಲಿ ಕುರ್ಚಿಗಳ ದರ್ಶನವಾಗುತ್ತಿದೆ. ಇದರಿಂದ ಕೆಂಗೆಟ್ಟಿರುವ ಬಿಜೆಪಿಗರು ಹಣಬಲ ತೋಳಬಲದ ಮೊರೆ ಹೋಗಿರುವುದು ನಾಚಿಗೆಗೇಡು ಎಂದು ವಾಗ್ದಾಳಿ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka