ಚಿತ್ತಾಪುರದ ಜನತೆಗೆ ಕೃತಜ್ಞತೆ ಸಲ್ಲಿಸಿದ ಪ್ರಿಯಾಂಕ್ ಖರ್ಗೆ, ಮತದಾರರಿಗೆ ವಿಶೇಷ ಮನವಿ ಮಾಡಿಕೊಂಡ್ರು!

2023ರ ಸಾರ್ವತ್ರಿಕ ಚುನಾವಣೆಯಲ್ಲಿ ಚಿತ್ತಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸಿ ಮತ್ತೊಮ್ಮೆ ಚಿತ್ತಾಪುರದ ಜನತೆಯ ಸೇವೆ ಮಾಡಲು ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಸದಾ ನನ್ನ ಬೆನ್ನೆಲುಬಾಗಿ ನಿಂತಿರುವ ಚಿತ್ತಾಪುರದ ಜನತೆಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ಕ್ಷೇತ್ರದ ಜನತೆಗೆ ಪ್ರಿಯಾಂಕ್ ಖರ್ಗೆ ಕೃತಜ್ಞತೆ ತಿಳಿಸಿದ್ದಾರೆ.
ಕಳೆದ 13 ವರ್ಷದಲ್ಲಿ ಚಿತ್ತಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಲ್ಕನೇ ಬಾರಿಗೆ ಮತ್ತೆ ಅವಕಾಶ ನೀಡಿದೆ. ಮೊದಲು 2009ರ ವಿಧಾನಸಭಾ ಉಪಚುನಾವಣೆ, ನಂತರ 2013, 2018 ಹಾಗೂ ಈಗ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ನನ್ನ ಮೇಲೆ ನಂಬಿಕೆ ಇಟ್ಟು ಚಿತ್ತಾಪುರವನ್ನು ಪ್ರತಿನಿಧಿಸಲು ಅವಕಾಶ ನೀಡಿದೆ. ಇದಕ್ಕಾಗಿ ನಮ್ಮ ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಅವರಿಗೆ, ರಾಹುಲ್ ಗಾಂಧಿ ಅವರಿಗೆ, AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸಾಹೇಬರಿಗೆ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರಿಗೆ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರಿಗೆ, ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಹಾಗೂ ಚಿತ್ತಾಪುರದ ನನ್ನ ಆತ್ಮೀಯ ಮತದಾರರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದಿದ್ದಾರೆ.
ನಿಮ್ಮೆಲ್ಲರ ನಂಬಿಕೆಯನ್ನು ಉಳಿಸಿಕೊಂಡು ಸದಾ ಜನಪರವಾಗಿ ಕೆಲಸ ಮಾಡುವುದನ್ನು ಪ್ರಾಮಾಣಿಕವಾಗಿ ಮುಂದುವರೆಸಿಕೊಂಡು ಹೋಗಲಿದ್ದೇನೆ. ಚಿತ್ತಾಪುರದ ಅಭಿವೃದ್ಧಿಯ ಹಾದಿಯಲ್ಲಿ ಜೊತೆಗಾಗಿರುವ ಚಿತ್ತಾಪುರದ ಪ್ರಜ್ಞಾವಂತ ಮಹಾಜನತೆಗೆ ನಿಮ್ಮ ಅತ್ಯಮೂಲ್ಯವಾದ ಮತ ನೀಡುವ ಮೂಲಕ ಮತ್ತೊಮ್ಮೆ ನಿಮ್ಮ ಸೇವೆ ಮಾಡುವ ಅವಕಾಶ ನೀಡಬೇಕು ಎಂದು ಈ ಮೂಲಕ ವಿನಂತಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw