ಇಂದು ಹನೂರಿಗೆ ಪ್ರಿಯಾಂಕಾ ಗಾಂಧಿ: ಮಹಿಳೆಯರೊಂದಿಗೆ ಸಂವಾದ, ಚುನಾವಣಾ ಪ್ರಚಾರ - Mahanayaka
8:18 PM Wednesday 11 - December 2024

ಇಂದು ಹನೂರಿಗೆ ಪ್ರಿಯಾಂಕಾ ಗಾಂಧಿ: ಮಹಿಳೆಯರೊಂದಿಗೆ ಸಂವಾದ, ಚುನಾವಣಾ ಪ್ರಚಾರ

priyanka gandhi
25/04/2023

ಚಾಮರಾಜನಗರ: ಕಿತ್ತೂರು ಕರ್ನಾಟಕ ಭಾಗದಲ್ಲಿ ಸಹೋದರ ರಾಹುಲ್ ಗಾಂಧಿ ಪ್ರಚಾರ ಮಾಡುತ್ತಿತುವ ಬೆನ್ನಲ್ಲೇ ಈಗ ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದು ಇಂದಿನಿಂದ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರಿಗೆ ಮಧ್ಯಾಹ್ನ 2:30 ರ ಸುಮಾರಿಗೆ ಬರಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಗಿರಿಜನ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ‌‌. ಗಿರಿಜನ ಮಹಿಳೆಯರ ಅಭಿವೃದ್ಧಿಗೆ ಕಾಂಗ್ರೆಸ್ ನೀತಿ, ಕಾರ್ಯಕ್ರಮಗಳ ಬಗ್ಗೆ ಪ್ರಿಯಾಂಕಾ ತಿಳಿಸಲಿದ್ದಾರೆ.

ಇನ್ನು, ಸಂವಾದದ ಬಳಿಕ ಜಿಲ್ಲೆಯ ನಾಲ್ಕು ಕ್ಷೇತ್ರದ ಕೈ ಅಭ್ಯರ್ಥಿಗಳ ಪರವಾಗಿ ಚುನಾವಣಾ ಭಾಷಣ ಮಾಡಲಿದ್ದು ಈಗಾಗಲೇ ಹನೂರಿನಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.

ಸೋಮವಾರವಷ್ಟೇ ಗುಂಡ್ಲುಪೇಟೆಯಲ್ಲಿ ಅಮಿತ್ ಷಾ ರೋಡ್ ಶೋ ಮಾಡಿ ಕಮಲಪಡೆಗೆ ರಣೋತ್ಸಾಹ ತುಂಬಿದ್ದರು. ಈಗ ಕೈ ನಾಯಕಿ ಎಂಟ್ರಿ ಕೊಡುತ್ತಿದ್ದು ಕೈ ಪಡೆಗೆ ಶಕ್ತಿ ತುಂಬಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ