ಕನ್ನಡದ ಮತ್ತೋರ್ವ ಹಿರಿಯ ನಟ ಪ್ರೊ.ಜಿ.ಕೆ.ಗೋವಿಂದ ರಾವ್ ನಿಧನ
ಬೆಂಗಳೂರು: ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ.ಗೋವಿಂದ ರಾವ್ ಶುಕ್ರವಾರ ಬೆಳಿಗ್ಗೆ ಹುಬ್ಬಳ್ಳಿಯ ಅವರ ಪುತ್ರಿಯ ಮನೆಯಲ್ಲಿ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯು ಹುಬ್ಬಳ್ಳಿಯ ಕೇಶ್ವಾಪುರದ ಮುಕ್ತಿಧಾಮದಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ನಡೆಯಲಿದೆ.
ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ರಂಗಭೂಮಿ ಕಲಾವಿದರೂ ಆಗಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ ಹಾಗೂ ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು.
ಕಳೆದ ಕೆಲವು ಸಮಯಗಳಿಂದ ವಯೋಸಹಜ ಅನಾರೋಗ್ಯಗಳಿಂದ ಅವರು ಬಳಲುತ್ತಿದ್ದರು. ಆದರೂ ತಮ್ಮ ರಂಗ ಚಟುವಟಿಕೆ ಹೋರಾಟಗಳಲ್ಲಿ ಅವರು ಸಕ್ರಿಯರಾಗಿದ್ದರು. ಸಾಹಿತ್ಯ ಕ್ಷೇತ್ರದಲ್ಲಿ ಕೂಡ ಸಾಧನೆ ಮಾಡಿರುವ ಜಿ.ಕೆ.ಗೋವಿಂದ ರಾವ್, , ಈಶ್ವರ ಅಲ್ಲಾ ಎಂಬ ಕಿರು ಕಾದಂಬರಿ, ಶೇಕ್ಸ್ಪೀಯರ್ ನಾಟಕ ಅಧ್ಯಯನ, ಶೇಕ್ಸ್ಪೀಯರ್ ಸಂವಾದ ಲೇಖನ ಮಾಲಿಕೆ, ನಡೆ ನುಡಿ ನಾಗರಿಕತೆ, ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್ ಮೊದಲಾದ ಕೃತಿಗಳನ್ನು ಬರೆದಿದ್ದಾರೆ.
ಇನ್ನೂ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಜಿ.ಕೆ. ಗೋವಿಂದರಾವ್ ಅವರಿಗೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. ಹಿರಿಯ ಲೇಖಕ, ಚಿಂತಕ, ನಟ ಪ್ರೊ.ಜಿ.ಕೆ. ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು. ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಅವರು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಇನ್ನಷ್ಟು ಸುದ್ದಿಗಳು…
ದೇವಸ್ಥಾನದ ಆವರಣದಲ್ಲಿಯೇ ಮುಖ್ಯ ಅರ್ಚಕನನ್ನು ಗುಂಡು ಹಾರಿಸಿ ಕೊಂದ ಯುವಕರು !
ಗ್ಯಾಸ್ ಟ್ಯಾಂಕ್ ಗೆ ಬಿದ್ದು ಇಬ್ಬರು ಕಾರ್ಮಿಕರ ದಾರುಣ ಸಾವು
ಗ್ರಾಮಾಂತರ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಟ ವಿಜಯ್ ಅಭಿಮಾನಿಗಳ ಸಂಘ
ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ಆರೋಪ: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅರೆಸ್ಟ್
ಪುತ್ತೂರು: ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾದಿಂದ 65ನೇ ಧಮ್ಮದೀಕ್ಷಾ ಕಾರ್ಯಕ್ರಮ
ಅಮಾನವೀಯ ಘಟನೆ: ಹೊಲದಲ್ಲಿ ಗನ್ ಪಾಯಿಂಟ್ ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ
ಸಲೀಂ- ಉಗ್ರಪ್ಪ ಸಂಭಾಷಣೆ: ಸ್ವತಂತ್ರ ಏಜೆನ್ಸಿಯಿಂದ ತನಿಖೆ ಮಾಡಿಸಬೇಕು | ಡಿ.ವಿ.ಸದಾನಂದ ಗೌಡ