ಪ್ರವಾದಿ ವಿರುದ್ಧ ಹೇಳಿಕೆ ಖಂಡಿಸಿ ಪ್ರತಿಭಟನೆ: ಗಾಯಗೊಂಡಿದ್ದ ಇಬ್ಬರು ಸಾವು
ರಾಂಚಿ: ಪ್ರವಾದಿ ಕುರಿತು ಬಿಜೆಪಿಯ ರಾಷ್ಟ್ರೀಯ ಮಾಜಿ ವಕ್ತಾರೆ ನೂಪುರ್ ಶರ್ಮಾ ನೀಡಿದ್ದ ಹೇಳಿಕೆಯನ್ನ ಖಂಡಿಸಿ ಶುಕ್ರವಾರ ರಾಂಚಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಇವರನ್ನು ರಾಜೇಂದ್ರ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇವತ್ತು ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸಾವನ್ನಪ್ಪಿದ್ದಾರೆ.
ನೂಪುರ್ ಶರ್ಮಾ ಹೇಳಿಕೆಯನ್ನು ಖಂಡಿಸಿ ದೆಹಲಿ, ಉತ್ತರ ಪ್ರದೇಶ, ತೆಲಂಗಾಣ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆ ವೇಳೆ ಕಲ್ಲು ತೂರಾಟ ಸೇರಿದಂತೆ ನಾನಾ ಹಿಂಸಾಚಾರ ನಡೆದಿತ್ತು. ಇನ್ನು ಹಿಂಸಾಚಾರ ಸಂಬಂಧ ಉತ್ತರ ಪ್ರದೇಶದಲ್ಲಿ 227 ಅಧಿಕ ಮಂದಿಯನ್ನು ಯೋಗಿ ಸರ್ಕಾರ ಬಂಧಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ರಸ್ತೆಯಲ್ಲಿ ಗಾಯಗೊಂಡು ಬಿದ್ದಿದ್ದ ಗಿಡುಗನನ್ನು ರಕ್ಷಿಸಲು ಯತ್ನಿಸಿದವರಿಗೆ ಕಾರು ಡಿಕ್ಕಿ: ಇಬ್ಬರು ಸಾವು
ಕಾಂಗ್ರೆಸ್ ನ ಹೀನಾಯ ಸೋಲು: ‘ಚಿಂತಿಸಿ ಫಲವಿಲ್ಲ’ ಎಂದ ಡಿ.ಕೆ.ಶಿವಕುಮಾರ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕತ್ತೆ ಸಾಕಣಿಕೆ ಕೇಂದ್ರ ಸ್ಥಾಪಿಸಿದ ರಾಮನಗರದ ಶ್ರೀನಿವಾಸ್ ಗೌಡ
ಆಂಬುಲೆನ್ಸ್ ಸಿಗಲಿಲ್ಲ: ಮಗಳ ಮೃತದೇಹ ಹೆಗಲಲ್ಲಿ ಹೊತ್ತು ನಡೆದ ತಂದೆ!
ಪ್ರವಾದಿ ವಿರುದ್ಧ ಹೇಳಿಕೆ ವಿರುದ್ಧ ಸಿಡಿದೆದ್ದ ಮುಸ್ಲಿಮರ ಪ್ರತಿಭಟನೆ ಬಗ್ಗೆ ಸುಬ್ರಮಣಿಯನ್ ಸ್ವಾಮಿ ಹೇಳಿದ್ದೇನು?