ಮದ್ಯ ಖರೀದಿ ವಯಸ್ಸು ಇಳಿಕೆ ಪ್ರಸ್ತಾವ ಹಿಂಪಡೆಯದಿದ್ದರೆ ಹೋರಾಟ: ಯು.ಟಿ.ಖಾದರ್
ಬಿಜೆಪಿ ಸರಕಾರಕ್ಕೆ ಅಡಳಿತವನ್ನು ನಡೆಸಲು ಗೊತ್ತಿಲ್ಲ. ಸರಕಾರ ಮದ್ಯ ಖರೀದಿ ವಯಸ್ಸಿನ ಮಿತಿಯನ್ನು ಇಳಿಸುವ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಶಾಸಕ ಯು.ಟಿ.ಖಾದರ್ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮದ್ಯ ಖರೀದಿಯ ಕಾನೂನುಬದ್ಧ ವಯೋಮಿತಿಯನ್ನು 21 ರಿಂದ 18 ವರ್ಷಕ್ಕೆ ಇಳಿಸುವ ರಾಜ್ಯ ಸರಕಾರದ ಪ್ರಸ್ತಾವಕ್ಕೆ ನಮ್ಮ ವಿರೋಧ ಇದೆ ಎಂದ ಅವರು, ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಯುವಕರನ್ನು ದುಶ್ಚಟಗಳಿಂದ ದೂರ ಮಾಡಲು ಪ್ರಯತ್ನಿಸಬೇಕು. ಯುವಕರಿಗೆ ಮದ್ಯ ಸೇವಿಸಲು ಆಹ್ವಾನ ನೀಡುವಂತಹ ರಾಜ್ಯ ಸರಕಾರದ ಈ ಪ್ರಸ್ತಾವವನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಇನ್ನು ಸರಕಾರ ಕೇವಲ ಆದಾಯದ ಬಗ್ಗೆ ಯೋಚಿಸುತ್ತಿದೆ. ಆದಾಯ ಹೆಚ್ಚಿಸಲು ಸರಕಾರ ಬೇರೆ ದಾರಿಯನ್ನು ಕಂಡು ಹುಡುಕಲಿ. ಅದನ್ನು ಬಿಟ್ಟು ಯುವ ಜನರನ್ನು ಬಲಿಕೊಡುವ ನಿಟ್ಟಿನಲ್ಲಿ ತಪ್ಪು ಹೆಜ್ಜೆ ಇಡುವುದು ಬೇಡ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw