ಸಮುದ್ರದಲ್ಲಿ ಮುಳುಗುತ್ತಿದ್ದ ಪ್ರವಾಸಿಯ ರಕ್ಷಣೆ!
ಭಟ್ಕಳ: ಮುರುಡೇಶ್ವರದ ಕಡಲಿನಲ್ಲಿ ಮುಳುಗುತ್ತಿದ್ದ ವ್ಯಕ್ತಿಯೊಬ್ಬನನ್ನು ಕರಾವಳಿ ಕಾವಲು ಪಡೆಯ ಕೆ.ಎನ್.ಡಿ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಮುರುಡೇಶ್ವರ ಪ್ರವಾಸಕ್ಕೆ ಆಗಮಿಸಿದ ಬೆಂಗಳೂರಿನ ನಿವಾಸಿ ಪುನೀತ್ ಕೆ. (19) ತನ್ನ ಸ್ನೇಹಿತರೊಂದಿಗೆ ಕಡಲಿನಲ್ಲಿ ಈಜಲು ತೆರಳಿದ್ದರು, ಈಜು ಬಾರದ ಪುನೀತ್ ಸಮುದ್ರದ ಅಲೆಗೆ ಸಿಕ್ಕು ಕೊಚ್ಚಿಕೊಂಡು ಹೋಗುವಾಗ ಕೆ.ಎನ್.ಡಿ ಸಿಬ್ಬಂದಿ ಯೊಗೇಶ ಹರಿಕಾಂತ ಹಾಗೂ ಲಕ್ಷ್ಮಣ ಹರಿಕಾಂತ ಅವರು ಯೊಗೇಶನ ತಂದೆಯ ಪಾತಿ ದೋಣಿ ತೆಗೆದುಕೊಂಡು ಪುನೀತನನ್ನು ರಕ್ಷಣೆ ಮಾಡಿದ್ದಾರೆ.
ಕಳೆದ ವಾರ ಬೆಂಗಳೂರಿನ ವಿದ್ಯಾರ್ಥಿ ಮೃತಪಟ್ಟ ಹಿನ್ನೆಲೆಯಲ್ಲಿ ಕಡಲ ಪ್ರವೇಶಕ್ಕೆ ನಿರ್ಭಂದ ಹೇರಲಾಗಿತ್ತು. ಶನಿವಾರ ದೇವಸ್ಥಾನ ಎಡಭಾಗದ ಬದಲಿಗೆ ಬಲಭಾಗದಲ್ಲಿ ಮೀನುಗಾರಿಕೆ ನಡೆಸುವ ಕಡಲ ತೀರ ಪ್ರವೇಶಕ್ಕೆ ಪ್ರವಾಸಿಗರಿಗೆ ಅನುಮತಿ ನೀಡಲಾಗಿತ್ತು. ಆದರೆ ಪ್ರವಾಸಿಗರ ರಕ್ಷಣೆಗೆ ಅವಶ್ಯ ಇರುವ ಸ್ಪೀಡ್ ಬೋಡ್, ಜೀವರಕ್ಷಕ ಸಾಮಗ್ರಿ ನೀಡಿರಲಿಲ್ಲ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: