ಪರಿಶಿಷ್ಟ ಜಾತಿ–ಪಂಗಡದ ನೌಕರರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ: ಜಗದೀಶ್ ಪಾಂಡೇಶ್ವರ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊಗೈ ಬಜಾರ್‌ನಲ್ಲಿರುವ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಅನ್ಯಾಯವಾಗುತ್ತಿದ್ದು, ಒಂದು ವಾರದೊಳಗೆ ನ್ಯಾಯ ದೊರಕಿಸಿಕೊಡದಿದ್ದರೆ ಕಚೇರಿಯ ಮುಂದೆ ಪ್ರತಿಭಟನೆ ಮಾಡುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಸಂಚಾಲಕ ಜಗದೀಶ್ ಪಾಂಡೇಶ್ವರ ಹೇಳಿದ್ದಾರೆ.
ಅವರು ಮಂಗಳೂರು ನಗರದ ಖಾಸಗಿ ಹೊಟೇಲ್ ಹಾಲ್ ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕೆಲವು ಅಧಿಕಾರಿಗಳು ಉದ್ದೇಶಪೂರ್ವಕವಾಗಿ ದಲಿತ ಸಿಬ್ಬಂದಿ ವರ್ಗಕ್ಕೆ ಅನ್ಯಾಯ ಎಸಗುತ್ತಿದ್ದಾರೆ. ಪದೋನ್ನತಿ ವಿಚಾರದಲ್ಲಿ ಅರ್ಹತೆಯಿದ್ದರೂ ನೀಡದೆ ಅಧಿಕಾರಿಗಳು ವಂಚಿಸಿದ್ದಾರೆ. ಬ್ಯಾಕ್ ಲಾಗ್ ಹುದ್ದೆಯನ್ನು ಭರ್ತಿಗೊಳಿಸದೆ ಕಾಲಹರಣ ಮಾಡುತ್ತಾರೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಂಗಳೂರು ತಾಲೂಕು ಸಂಚಾಲಕ ಕೆ.ಚಂದ್ರ ಕಡಂದಲೆ, ಜಿಲ್ಲಾ ಸಂಘಟನಾ ಸಂಚಾಲಕ ನಾಗೇಶ್ ಮುಲ್ಲಕಾಡು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw