3 ವರ್ಷಗಳಿಂದ ಬಾಕಿ ಇರುವ ಕನಿಷ್ಟ ಕೂಲಿ, ತುಟ್ಟಿಭತ್ಯೆ ನೀಡುವಂತೆ ಒತ್ತಾಯಿಸಿ ಬೀಡಿ ಕಾರ್ಮಿಕರಿಂದ ಪ್ರತಿಭಟನೆ - Mahanayaka
7:12 PM Thursday 12 - December 2024

3 ವರ್ಷಗಳಿಂದ ಬಾಕಿ ಇರುವ ಕನಿಷ್ಟ ಕೂಲಿ, ತುಟ್ಟಿಭತ್ಯೆ ನೀಡುವಂತೆ ಒತ್ತಾಯಿಸಿ ಬೀಡಿ ಕಾರ್ಮಿಕರಿಂದ ಪ್ರತಿಭಟನೆ

12/08/2023

ಉಡುಪಿ: ಕಾರ್ಮಿಕರ ಮೂರು ವರ್ಷಗಳಿಂದ ಬಾಕಿ ಇರುವ ಕಾರ್ಮಿಕರ ಕನಿಷ್ಟ ಕೂಲಿ, ತುಟ್ಟಿಭತ್ಯೆ ನೀಡುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್(ಸಿಐಟಿಯು) ವತಿಯಿಂದ ಇಂದು ಉಡುಪಿಯ ಭಾರತ್ ಬೀಡಿ ಕಂಪನಿಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್‌ನ ಉಪಾಧ್ಯಕ್ಷ ಬಿ.ಎಂ.ಭಟ್, ಬೀಡಿ ಕಾರ್ಮಿಕರ ಒಕ್ಕೂಟ ಬೀಡಿ ಕಾರ್ಮಿಕರಿಗೆ ನ್ಯಾಯೋಚಿತವಾಗಿ ನೀಡಬೇಕಾದ 2015ರಿಂದ ಬಾಕಿ ಇರುವ ತುಟ್ಟಿಭತ್ಯೆ, 2018ರಿಂದ ಬಾಕಿ ಇರುವ ಕನಿಷ್ಠ ಕೂಲಿಯನ್ನು ನೀಡದೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

ಸಿಐಟಿಯು ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ ಮಾತನಾಡಿ, ನಮ್ಮನ್ನು ಆಳುವ ಬಿಜೆಪಿ ಕಾಂಗ್ರೆಸ್ ಸರಕಾರ ಬ್ರಿಟೀಷರಿಗಿಂತ ಕ್ರೂರವಾದ ನೀತಿಗಳನ್ನು ಜಾರಿಗೆ ತರುತ್ತಿದ್ದಾರೆ. ಬಂಡವಾಳ ಶಾಹಿ ಪರವಾದ ಈ ಸರಕಾರಗಳು ಕಾರ್ಮಿಕರ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ದೂರಿದರು.

ಫೆಡರೇಶನ್ ಉಡುಪಿ ಜಿಲ್ಲಾಧ್ಯಕ್ಷ ಮಹಾಬಲ ವಡೇರಹೊಬಳಿ, ಕಾರ್ಯ ದರ್ಶಿ ಉಮೇಶ್ ಕುಂದರ್, ಉಡುಪಿ ಬೀಡಿ ಸಂಘದ ಅಧ್ಯಕ್ಷೆ ನಳಿನಿ ಎಸ್., ಕುಂದಾಪುರ ಬೀಡಿ ಸಂಘದ ಅಧ್ಯಕ್ಷೆ ಬಲ್ಕೀಸ್ ಬಾನು, ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷ ಸುನೀತಾ ಶೆಟ್ಟಿ, ಕಾರ್ಯದರ್ಶಿ ಕವಿರಾಜ್ ಎಸ್., ಸಿಐಟಿಯು ಉಡುಪಿ ಜಿಲ್ಲಾಧ್ಯಕ್ಷ ಕೆ.ಶಂಕರ್, ಖಜಾಂಚಿ ಶಶಿಧರ ಗೊಲ್ಲ, ಉಡುಪಿ ಜಿಲ್ಲಾ ಹೆಂಚು ಕಾರ್ಮಿಕರ ಸಂಘದ ಕಾರ್ಯದರ್ಶಿ ಎಚ್.ನರಸಿಂಹ, ಸಿಐಟಿಯು ಕುಂದಾಪುರ ವಲಯ ಸಂಚಾಲಕ ಚಂದ್ರಶೇಖರ, ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್ ಕೋಣಿ, ಪ್ರೇಮ ನೆಲ್ಲಿಕಟ್ಟೆ, ರತ್ನ ಗುಲ್ವಾಡಿ, ಗುಲಾಬಿ, ಪ್ರೇಮ ಬಳ್ಕೂರು, ಪದ್ದು, ರತ್ನ, ವಸಂತಿ, ಇಂದಿರಾ, ಡಿ.ಗಿರಿಜಾ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ