ಕಾಂಗ್ರೆಸ್ ನಿಂದ ರಾಜ್ಯಪಾಲರಿಗೆ ಅವಮಾನ: ಆ. 22ರಂದು ಬಿಜೆಪಿಯಿಂದ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ
![BJP protest](https://www.mahanayaka.in/wp-content/uploads/2024/08/BJP-protest.jpg)
ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಅವಮಾನಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಗುರುವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದ್ದು, ಈ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ರಾಜ್ಯ ಕೋರ್ ಕಮಿಟಿ ಸದಸ್ಯರು, ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಈ ಸಂದರ್ಭದಲ್ಲಿ ರಾಜ್ಯಪಾಲರ ಭಾವಚಿತ್ರ ದಹನ ಹಾಗೂ ಸಚಿವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಬೇಕು ಎಂದು ಸುನೀಲ್ ಕುಮಾರ್ ಒತ್ತಾಯಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth