ಸೌಜನ್ಯ ಪ್ರಕರಣ ಮರುತನಿಖೆಗೆ ಆಗ್ರಹಿಸಿ ಆಗಸ್ಟ್ 27ರಂದು ಬಿಜೆಪಿಯಿಂದ ಪ್ರತಿಭಟನೆ: ನಳಿನ್ ಕುಮಾರ್ ಕಟೀಲ್

nalin kumar kateel
12/08/2023

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಆಗಸ್ಟ್ 27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಶಾಸಕರಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ಮಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಪ್ರತಿಭಟನೆ ಬಳಿಕ ಮರುದಿನ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ನೀಡಲಾಗುವುದು. ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಲಾಗುವುದು ಎಂದರು.

ಎಸ್ ಡಿಎಂ ವಿದ್ಯಾರ್ಥಿನಿ ಸೌಜನ್ಯ ಪ್ರಕರಣದ ಕುರಿತು ಸಿಐಡಿ ಬಳಿಕ ಹೋರಾಟ ನಡೆದು ಸಿಬಿಐ ತನಿಖೆ ಕೂಡ ಆಗಿದೆ. ಕೊನೆಗೆ ಸಿಬಿಐ ಬಂಧಿತ ವ್ಯಕ್ತಿ ಆರೋಪಿ ಅಲ್ಲ ಅಂತ ಹೇಳಿದೆ. ಅವತ್ತು ಕೂಡ ಬಿಜೆಪಿ ಈ ವಿಚಾರದಲ್ಲಿ ಹೋರಾಟ ಮಾಡಿತ್ತು. ಇದೀಗ ಮತ್ತೆ ಬಿಜೆಪಿ ಇಡೀ ಪ್ರಕರಣದ ಮರು ತನಿಖೆಗೆ ಆಗ್ರಹಿಸುತ್ತದೆ ಎಂದರು.

ಘಟನೆಯ ಬಳಿಕದ ಹೋರಾಟಗಳು, ಕುಟುಂಬದ ಆಗ್ರಹಗಳ ತನಿಖೆ ಆಗಬೇಕು. ಹಂತಕರ ಪತ್ತೆ ಮೂಲಕ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದರು.

ವಿಡಿಯೋ ನೋಡಿ:

ಇತ್ತೀಚಿನ ಸುದ್ದಿ

Exit mobile version