ಮಣಿಪುರದಲ್ಲಿನ ಕ್ರೈಸರ ಮೇಲಿನ ದಾಳಿ ಖಂಡಿಸಿ ಕ್ರೈಸ್ತ ಸಮುದಾಯದಿಂದ ಪ್ರತಿಭಟನೆ
ಮಂಗಳೂರು: ಮಣಿಪುರದಲ್ಲಿನ ಕ್ರೈಸರ ಮೇಲಿನ ದಾಳಿಯನ್ನು ಖಂಡಿಸಿ ಕರ್ನಾಟಕ ಸಿರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್ (KSMCA) ನೇತೃತ್ವದಲ್ಲಿ ಕ್ರೈಸ್ತ ಸಮುದಾಯದ ವತಿಯಿಂದ ಪ್ರತಿಭಟನೆ ನಡೆಯಿತು.
ಮಣಿಪುರ ರಾಜ್ಯದಲ್ಲಿ ಸುಮಾರು ಎರಡು ತಿಂಗಳುಗಳಿಂದ ಅಲ್ಲಿನ ಕ್ರೈಸ್ತ ಸಮುದಾಯದ ಮೇಲೆ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮತ್ತು ದಾಳಿಯನ್ನು ಖಂಡಿಸಿದ ಪ್ರತಿಭಟನಾಕಾರರು ಮಂಗಳೂರು ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರವು ತಕ್ಷಣವೇ ಕ್ರೈಸ್ತರ ಮೇಲಿನ ದೌರ್ಜನ್ಯ ತಡೆದು ನೊಂದವರಿಗೆ ಪರಿಹಾರ, ಮನೆ, ಆರಾಧನಾಲಯಗಳನ್ನು ಮರು ನಿರ್ಮಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw