ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೀನುಗಾರರಿಂದ ಪ್ರತಿಭಟನೆ
ಉಡುಪಿ: ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘ (ಸಿಐಟಿಯು) ನೇತೃತ್ವದಲ್ಲಿ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ರಾಜ್ಯದ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.
ಮೀನು ಕಾರ್ಮಿಕರಿಗೆ ಕಲ್ಯಾಣ ಮಂಡಳಿ ರಚನೆ ಯಾಗಬೇಕು. ನಿವೇಶನ, ವಸತಿ,ವಿದ್ಯಾರ್ಥಿ ವೇತನ,ಹೆಣ್ಣು ಮಕ್ಕಳಿಗೆ ಮದುವೆ ಸಹಾಯ, 60 ವರ್ಷದ ಬಳಿಕ ಪಿಂಚಣಿ ಯೋಜನೆ ಜಾರಿಯಾಗಬೇಕು. ಎಲ್ಲಾ ಮೀನುಗಾರರಿಗೆ ಬಿಪಿಎಲ್ ಕಾರ್ಡ್ ನೀಡಬೇಕು. ಜೀವನಾವಶ್ಯ ವಸ್ತುಗಳನ್ನು ಕಡಿಮೆ ದರದಲ್ಲಿ ನೀಡಬೇಕು. ಅಪಘಾತದಲ್ಲಿ ಮರಣ ಹೊಂದಿದ್ದಲ್ಲಿ 10ಲಕ್ಷ ಪಾರಿಹಾರ ಕೊಡಬೇಕು. ಕರಾವಳಿ ಉದ್ದಕ್ಕೂ ಕೇರಳ ಮಾದರಿಯಂತೆ ಶಾಶ್ವತ ತಡೆಗೋಡೆ ನಿರ್ಮಾಣ ಮಾಡಿ ಮಳೆಗಾಲದಲ್ಲಿ ಆಗುವ ಅನಾಹುತಗಳನ್ನು ತಡೆಗಟ್ಟಬೇಕು.
ಪ್ರತಿಭಟನೆಯಲ್ಲಿ ಮೀನುಗಾರರ ಸಂಘದ ಜಿಲ್ಲಾ ಅಧ್ಯಕ್ಷ ರಾದ ಕೆ.ಶಂಕರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕವಿರಾಜ್.ಎಸ್,ಉಪಾಧ್ಯಕ್ಷ ರಾದ ವೆಂಕಟೇಶ್ ಕೋಣಿ,ಮೋಹನ್,ಇಲಿಯಾಸ್,ಅನ್ವರ್ ಕಟಪಾಡಿ,ಉಮಾರ್,ಸೋನುಕನಾಲ್ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw