ವೆನ್ಲಾಕ್ ಆಸ್ಪತ್ರೆಯಲ್ಲಿ ಬಜರಂಗದಳ ಕಾರ್ಯಕರ್ತ ಅನಾರೋಗ್ಯದಿಂದ ಸಾವು: ವೈದ್ಯರ ನಿರ್ಲಕ್ಷ್ಯ ವಿರುದ್ಧ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಬಜರಂಗದಳ ಕಾರ್ಯಕರ್ತ ಬಂಟ್ವಾಳ ಸರಪಾಡಿ ನಿವಾಸಿ ನಿತಿನ್ ಯಾನೆ ರೂಪೇಶ್ ಪೂಜಾರಿ ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇದು ವೈದ್ಯರ ನಿರ್ಲಕ್ಷ್ಯ ಎಂದು ಹಿಂದೂ ಸಂಘಟನೆಗಳು ಆರೋಪಿಸಿದೆ.
ನಿತಿನ್ ಯಾನೆ ರೂಪೇಶ್ ಪೂಜಾರಿ 3 ದಿನಗಳ ಹಿಂದೆ ಹೊಟ್ಟೆನೋವಿನಿಂದ ವೆನ್ಲೋಕ್ ಆಸ್ಪತ್ರೆ ಗೆ ದಾಖಲಾಗಿದ್ದರು. ಆದಿತ್ಯವಾರ ಅವರು ತೀರಿಕೊಂಡಿದ್ದು ವೈದ್ಯರು ಚಿಕಿತ್ಸೆ ನೀಡಿಲ್ಲ ನಿರ್ಲಕ್ಷ್ಯ ತೋರಿದರು ಎಂದು ಬಜರಂಗದಳದ ಕಾರ್ಯಕರ್ತರು ಆರೋಪಿಸಿದ್ದಾರೆ.
ಅಲ್ಲದೆ ಬಜರಂಗದಳ ಮತ್ತು ವೆನ್ಲಾಕ್ ವೈದ್ಯರ ನಡುವೆ ಮಾತಿನ ಚಕಮಕಿ ನಡೆದಿದೆ. ಕಾರ್ಯಕರ್ತರು ವೈದ್ಯರನ್ನು ತರಾಟೆಗೆತ್ತಿಕೊಂಡಿದ್ದಾರೆ. ಪ್ರತಿಭಟನೆಗೆ ಮುಂದಾದರು. ಈ ವೇಳೆ ಪೊಲೀಸರು ಆಗಮಿಸಿ ಸಮಾಧಾನಪಡಿಸಿದ್ದಾರೆ.
ರೂಪೇಶ್ ನಿರ್ಲಕ್ಷದ ಸಾವಿಗೆ ಕಾರಣರಾದ ವೈದ್ಯರನ್ನು ಬಂಧಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದಾರೆ. ಸುಮಾರು 50ಕ್ಕಿಂತ ಹೆಚ್ಚು ಭಜರಂಗದಳದ ಕಾರ್ಯಕರ್ತರು ಸೇರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw