ಹೆರಿಗೆಗೆ ಹೋಗಿದ್ದ ಗರ್ಭಿಣಿ ಸಾವು: ವೈದ್ಯರ ನಿರ್ಲಕ್ಷ್ಯ ವಿರುದ್ಧ ಆಸ್ಪತ್ರೆ ಮುಂದೆ ಪ್ರತಿಭಟನೆ
ಯಾದಗಿರಿ: ಹೆರಿಗೆಗೆ ಹೋಗಿದ್ದ ಗರ್ಭಿಣಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ಘಟನೆಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮಹಿಳೆಯ ಸಂಬಂಧಿಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ವಡಗೇರ ತಾಲೂಕಿನ ಗೂಡೂರು ಗ್ರಾಮದ ಸಂಗೀತಾ(20) ಮೃತಪಟ್ಟ ಗರ್ಭಿಣಿ ಮಹಿಳೆಯಾಗಿದ್ದು, ಮೇ 30ರಂದು ಹೆರಿಗೆಗೆಂದು ಸಂಗೀತಾ ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆ ನಡೆಸಿ ನಾರ್ಮಲ್ ಹೆರಿಗೆ ಮಾಡೋದಾಗಿ ವೈದ್ಯರು ಹೇಳಿದ್ದರು.
ಆದರೆ ಮೇ 4ರ ಸಂಜೆ ಮಹಿಳೆ ಸಾವನ್ನಪ್ಪಿರುವುದಾಗಿ ವೈದ್ಯರು ಸಂಬಂಧಿಕರಿಗೆ ತಿಳಿಸಿದ್ದಾರೆ. ಇದನ್ನು ಕೇಳಿದ ಮಹಿಳೆಯ ಸಂಬಂಧಿಕರು ಆಘಾತಕ್ಕೀಡಾಗಿದ್ದಾರೆ.
ವೈದ್ಯರ ನಿರ್ಲಕ್ಷ್ಯವನ್ನು ವಿರೋಧಿಸಿದ ಕುಟುಂಬಸ್ಥರು ಜಿಲ್ಲಾಸ್ಪತ್ರೆಯ ಮುಂದೆ ಮಹಿಳೆಯ ಮೃತದೇಹ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಘಟನೆ ಸಂಬಂಧ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw