ಮೀಸಲಾತಿ ರದ್ದು ವಿಚಾರ: ಮಾರ್ಚ್ 31ರಂದು ಮಂಗಳೂರಿನಲ್ಲಿ ಪ್ರತಿಭಟನೆ: ಮುಸ್ಲಿಮ್ ಒಕ್ಕೂಟ

ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಶೈಕ್ಷಣಿಕ ಸವಲತ್ತುಗಳಿಗೆ ಮೀಸಲಿರಿಸಿದ ಶೇಕಡಾ 4ರ 2ಬಿಯನ್ನು ರಾಜ್ಯ ಬಿಜೆಪಿ ಸರಕಾರ ರದ್ದುಗೊಳಿಸಿ ಇತರ ಸಮುದಾಯಕ್ಕೆ ನೀಡಿದ ಕ್ರಮದ ವಿರುದ್ಧ ಮಾರ್ಚ್ 31ರಂದು ಮಂಗಳೂರು ನಗರದ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ, ಮಾಜಿ ಮೇಯರ್ ಕೆ.ಅಶ್ರಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಂವಿಧಾನ ಬದ್ಧವಾಗಿರುವ ಮುಸ್ಲಿಮ್ ಸಮುದಾಯದ 2ಬಿ ಮೀಸಲಾತಿಯನ್ನು ರಾಜ್ಯ ಸರಕಾರ ರದ್ದುಗೊಳಿಸಿರು ವುದು ಮತೀಯ ತಾರತಮ್ಯ ಮತ್ತು ಸಮುದಾಯವನ್ನು ಶೈಕ್ಷಣಿಕ ಹಕ್ಕುಗಳಿಂದ ವಂಚಿಸುವ ಪ್ರಯತ್ನವಾಗಿದೆ.
ಮುಸ್ಲಿಮರ ಹಕ್ಕನ್ನು ಕಸಿದು ಒಕ್ಕಲಿಗ ಮತ್ತು ಲಿಂಗಾಯಿತ ಸಮುದಾಯಗಳಿಗೆ ಹಂಚಿರುವುದು ಅನ್ಯಾಯದ ಪರಮಾವಧಿಯಾಗಿದೆ. ರಾಜ್ಯ ಸರಕಾರ ತಕ್ಷಣ ಮುಸ್ಲಿಮ್ ಸಮುದಾಯದ ಮೀಸಲಾತಿಯನ್ನು ಮರು ಸ್ಥಾಪಿಸ ಬೇಕು ಎಂದು ಒತ್ತಾಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw