ಹರ್ಯಾಣ ವಿರುದ್ಧ ರೈತರ ಹೋರಾಟ: ಕಾರಣವೇನು..?

12/06/2023

ಹರ್ಯಾಣ ಸರ್ಕಾರದ ವಿರುದ್ಧ ರೈತರು ಬೀದಿಗಿಳಿದು ಹೋರಾಟ ನಡೆಸಲು ಆರಂಭಿಸಿದ್ದಾರೆ. ರಾಜ್ಯ ಸರ್ಕಾರವು ಸೂರ್ಯಕಾಂತಿ ಬೀಜಗಳನ್ನು MSPಯಲ್ಲಿ ಖರೀದಿಸುತ್ತಿಲ್ಲ. ಪ್ರತಿ ಕ್ವಿಂಟಾಲ್‍ಗೆ 6,400 ರೂ. ನೀಡಿ ಖರೀದಿಸಬೇಕಿದ್ದ ಸರ್ಕಾರ ಖಾಸಗಿ ಖರೀದಿದಾರರಿಗೆ ಕ್ವಿಂಟಾಲ್‍ ಗೆ 4000 ರೂಪಾಯಿಗೆ ಮಾರಾಟ ಮಾಡಲು ಒತ್ತಾಯಿಸುತ್ತಿದೆ ಎಂದು ಸೂರ್ಯಕಾಂತಿ ಬೆಳೆಗೆ ಬೆಂಬಲ ನೀಡುವಂತೆ ಆಗ್ರಹಿಸಿ ಕುರುಕ್ಷೇತ್ರ ಜಿಲ್ಲೆಯ ಪಿಪ್ಲಿ ಬಳಿಯ ಫ್ಲೈಓವರ್ ಮೇಲೆ ರೈತರು ಜಮಾಯಿಸಿದ್ದರು.

ರೈತರ ಪ್ರತಿಭಟನೆಯಿಂದ ದೆಹಲಿ-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ರೈತರು ಆರೋಪಿಸಿದ್ದಾರೆ. ರೈತ ನಾಯಕ ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪ್ರಮುಖ ಕುಸ್ತಿಪಟುಗಳು ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಈ ಪ್ರತಿಭಟನೆಗೂ ಮುನ್ನ ಕುರುಕ್ಷೇತ್ರದಲ್ಲಿ ಮಹಾಪಂಚಾಯತ್ ನಡೆಸಲಾಯಿತು. ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಸೇರಿದಂತೆ ಪ್ರಮುಖ ರೈತ ಮುಖಂಡರು, ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿರುವ ಕುಸ್ತಿಪಟುಗಳಲ್ಲಿ ಒಬ್ಬರಾದ ಬಜರಂಗ್ ಪುನಿಯಾ ಭಾಗಿಯಾಗಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version