ಈ ಊಟವನ್ನು ಪ್ರಾಣಿ ಕೂಡ ತಿನ್ನಲ್ಲ: ರಸ್ತೆಯಲ್ಲಿ ತಟ್ಟೆ ಹಿಡಿದುಕೊಂಡು ಕಣ್ಣೀರು ಹಾಕಿದ ಕಾನ್‌’ಸ್ಟೇಬಲ್ - Mahanayaka
3:29 AM Wednesday 5 - February 2025

ಈ ಊಟವನ್ನು ಪ್ರಾಣಿ ಕೂಡ ತಿನ್ನಲ್ಲ: ರಸ್ತೆಯಲ್ಲಿ ತಟ್ಟೆ ಹಿಡಿದುಕೊಂಡು ಕಣ್ಣೀರು ಹಾಕಿದ ಕಾನ್‌’ಸ್ಟೇಬಲ್

up police constable
11/08/2022

ಫಿರೋಜಾಬಾದ್: ಈ ಊಟವನ್ನು ಪ್ರಾಣಿ ಕೂಡ ತಿನ್ನಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶದ ಪೊಲೀಸ್ ವೊಬ್ಬರು ರಸ್ತೆಯಲ್ಲಿ ಊಟದ ತಟ್ಟೆ ಹಿಡಿದುಕೊಂಡು ಕಣ್ಣೀರು ಹಾಕುತ್ತಾ, ಸಾರ್ವಜನಿಕರಿಗೆ ಪ್ರದರ್ಶಿಸಿರುವ ಘಟನೆ  ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ಪೊಲೀಸ್ ಕಾನ್‌’ಸ್ಟೇಬಲ್ ಮನೋಜ್ ಕುಮಾರ್  ಸರ್ಕಾರದ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದು, ನಮಗೆ ಸರಿಯಾದ ಊಟ ಸಿಗುತ್ತಿಲ್ಲ. ಸರಿಯಾದ ಊಟ ಸಿಗದಿದ್ದರೆ ನಾವು ಹೇಗೆ ಕೆಲಸ ಮಾಡುವುದು ಎಂದು ಪ್ರಶ್ನಿಸಿರುವ  ಅವರು, ಇದನ್ನು ಪ್ರಶ್ನಿಸಿದರೆ, ಕೆಲಸದಿಂದ ತೆಗೆದು ಹಾಕುತ್ತೇವೆ ಅಂತ ಬೆದರಿಕೆ ಹಾಕುತ್ತಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ.

ಪೊಲೀಸ್ ಕಾನ್‌’ಸ್ಟೇಬಲ್ ಮನೋಜ್ ಕುಮಾರ್ ತಮಗೆ ಪೊಲೀಸ್ ಮೆಸ್​​ ನಲ್ಲಿ ಪ್ರತಿದಿನ ನೀಡಲಾಗುವ ರೊಟ್ಟಿ, ದಾಲ್ ಮತ್ತು ಅನ್ನದ ತಟ್ಟೆಯನ್ನು ಕೈಯಲ್ಲಿ ಹಿಡಿದು ರಸ್ತೆಯಲ್ಲಿ ಅಳುತ್ತಾ ನಿಂತಿರುವುದನ್ನು ವಿಡಿಯೋ ವೈರಲ್ ಆಗಿದೆ.  ರಸ್ತೆಯಲ್ಲಿ ನಿಂತು ಪ್ರತಿಭಟಿಸುತ್ತಿದ್ದ ಅವರು, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರನ್ನು ಮತ್ತೆ ಪೊಲೀಸ್ ಠಾಣೆಯೊಳಗೆ ಕರೆದೊಯ್ಯುವ ಪ್ರಯತ್ನ ಮಾಡಿ, ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದೆ.

ಪೊಲೀಸರಿಗೆ ಸರ್ಕಾರ ನೀಡುತ್ತಿರುವ ಆಹಾರ ಅತ್ಯಂಕ ಕಳಪೆಮಟ್ಟದ್ದಾಗಿದೆ. ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಒಳ್ಳೆಯ ಊಟ ಕೊಡಿ ಎಂದಿದ್ದಕ್ಕೆ ನನ್ನನ್ನು ಕೆಲಸದಿಂದ ವಜಾ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸ್ ಅಧಿಕಾರಿಗಳಿಗೆ ಪೌಷ್ಠಿಕ ಆಹಾರ ನೀಡಲು ರಾಜ್ಯ ಸರ್ಕಾರ ಭತ್ಯೆ ನೀಡುವುದಾಗಿ ಮುಖ್ಯಮಂತ್ರಿಗಳು ಈ ಹಿಂದೆಯೇ ಘೋಷಿಸಿದ್ದರು. ಆದರೆ, ಸುದೀರ್ಘ ಅವಧಿಯ ಕರ್ತವ್ಯ ನಿರ್ವಹಿಸಿದರೂ ನಮಗೆ ಸಿಗುವ ಊಟ ಈ ರೀತಿಯದ್ದು. ಇದನ್ನು ಪ್ರಾಣಿಗಳು ಕೂಡ ತಿನ್ನುವುದಿಲ್ಲ ಎಂದು ಮನೋಜ್ ಕುಮಾರ್ ಆರೋಪಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ