ಪರಿಶಿಷ್ಟ ಜಾತಿಯ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ | ಆರೋಪಿ ಪಿಎಸ್ ಐ ಅರ್ಜುನ್ ಜಾಮೀನು ಅರ್ಜಿ ವಜಾ
ಬೆಂಗಳೂರು: ಪರಿಶಿಷ್ಟ ಜಾತಿಯ ಯುವಕನನ್ನು ವಿಚಾರಣೆಗೆ ಕರೆದೊಯ್ದು, ಮತ್ತೋರ್ವ ಆರೋಪಿಯ ಮೂತ್ರವನ್ನು ಕುಡಿಸಿ ಅಮಾನತುಗೊಂಡಿದ್ದ ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಕೆ.ಅರ್ಜುನ್ ಹೊರಕೇರಿಯ ಜಾಮೀನು ಅರ್ಜಿಯನ್ನು ಬುಧವಾರ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ,
ಹಿಂದೆ ಚಿಕ್ಕಮಗಳೂರಿನ ಮೊದಲನೇಯ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಕೂಡ ಅರ್ಜುನ್ ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜುನ್ ಹೈಕೋರ್ಟ್ ಮೊರೆ ಹೋಗಿದ್ದರು, ಆದರೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.
ಆರೋಪಿಯ ಪರವಾಗಿ ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ವಾದಿಸಿದ್ದರು. ಪ್ರಕರಣದ ಪ್ರತಿವಾದಿಯಾಗಿರುವ ಸಂತ್ರಸ್ತ ಯುವಕ ಕೆ.ಎಲ್.ಪುನೀತ್ ಅವರನ್ನು ವಕೀಲರಾದ ಮೊಹಮ್ಮದ್ ಆಸೀಫ್ ಸಾದುಲ್ಲಾ, ಎಸ್.ಶಿವಮಣಿದನ್ ಹಾಗೂ ಬಸವ ಪ್ರಸಾದ್ ಕುನಾಲೆ ಪ್ರತಿನಿಧಿಸಿದ್ದರು.
ಇನ್ನಷ್ಟು ಸುದ್ದಿಗಳು…
ಗೃಹ ಸಚಿವರನ್ನು ರೇಪ್ ಮಾಡಿದ ಕಾಂಗ್ರೆಸ್ ನಾಯಕರ ಮೇಲೆ ಕೇಸ್ ಮಾಡಿ | ಡಿ.ಕೆ.ಶಿವಕುಮಾರ್ ಲೇವಡಿ
ಜಾತಿಯ ಕಾರಣಕ್ಕೆ ಜನರನ್ನು ದೂರವಿಟ್ಟ ಭಾರತದಲ್ಲಿ ಕುಷ್ಠ ರೋಗಿಗಳ ಸೇವೆ ಮಾಡಿದ ಮಹಾತಾಯಿ ಮದರ್ ತೆರೆಸಾ
ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ ಕಾಂಗ್ರೆಸ್ ನಿಂದ ವಿವಾದಾತ್ಮಕ ಹೇಳಿಕೆ
ಸರ್ಕಾರ ಮಾರಾಟದಲ್ಲಿ ನಿರತವಾಗಿದೆ, ನಿಮ್ಮ ಆರೋಗ್ಯ ನೀವೇ ನೋಡಿಕೊಳ್ಳಿ | ರಾಹುಲ್ ಗಾಂಧಿ
ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ ಕಾಂಗ್ರೆಸ್ ನಿಂದ ವಿವಾದಾತ್ಮಕ ಹೇಳಿಕೆ