ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ಪಿಎಸ್ ಐ ಅರ್ಜುನ್ ಗೆ ಜೈಲೇ ಗತಿ
ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿ ಚಿತ್ರ ಹಿಂಸೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಣಿಬೀಡು ಪಿಎಸ್ ಐ ಅರ್ಜುನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಚಿಕ್ಕಮಗಳೂರು 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ವಜಾಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಗೋಣಿಬೀಡು ಪಿಎಸ್ ಐ ಆಗಿದ್ದ ಅರ್ಜುನ್ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ದಲಿತ ಯುವಕನನ್ನು ಬಂಧಿಸಿರುವುದೇ ಅಲ್ಲದೇ ಠಾಣೆಯಲ್ಲಿ ಚಿತ್ರ ಹಿಂಸೆ ನೀಡಿ, ಮತ್ತೋರ್ವ ಆರೋಪಿಯ ಮೂತ್ರವನ್ನು ಕುಡಿಸಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತ್ತುಗೊಂಡಿದ್ದ ಅರ್ಜುನ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿ ತಲೆ ಮರೆಸಿಕೊಂಡಿದ್ದ.
ಇನ್ನೊಂದೆಡೆ ಕರ್ನಾಟಕ ಹೈಕೋರ್ಟ್ ನಲ್ಲಿ ಕೂಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ಆದರೆ ಈ ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಐಡಿ ಪೊಲೀಸರು ಅರ್ಜನ್ ನನ್ನು ಬಂಧಿಸಿ, ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ನಡುವೆ ಸಿಐಡಿ ಪೊಲೀಸರು ಕೂಡ ನ್ಯಾಯಾಲಯದ ಒಪ್ಪಿಗೆ ಪಡೆದು ಒಂದು ದಿನದ ಮಟ್ಟಿಗೆ ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ. ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ನಡುವೆ ಆರೋಪಿ ಅರ್ಜುನ್ ಮಂಗಳವಾರ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ನ್ಯಾಯಾಲಯ ತೀರ್ಪು ನೀಡಿದೆ. ಜಾಮೀನು ಅರ್ಜಿಯ ವಿಚಾರಣೆ ವೇಳೆ ಸಂತ್ರಸ್ತ ಯುವಕನ ಪರವಾಗಿ ಸರ್ಕಾರಿ ಅಭಿಯೋಜಕಿ ಭಾವನ ಹಾಗೂ ಖಾಸಗಿ ವಕೀಲ ಪರಮೇಶ್ವರ್ ವಾದ ಮಂಡಿಸಿದರು.
ಇನ್ನಷ್ಟು ಸುದ್ದಿಗಳು…
ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ತಲೆಮರೆಸಿಕೊಂಡಿದ್ದ ಪಿಎಸ್ ಐ ಅರ್ಜುನ್ ನನ್ನು ಬಂಧಿಸಿದ ಸಿಐಡಿ ಪೊಲೀಸರು
ಮಹಿಳೆಯನ್ನು ಕೊಂದು ಅಡುಗೆ ಮನೆಯಲ್ಲಿಯೇ ಸುಟ್ಟ ಲಿವ್ ಇನ್ ಪಾಟ್ನರ್!
ಬ್ರಾಹ್ಮಣರು ಹಾಗೂ ದಲಿತರು ಒಂದಾಗಬೇಕು | ಬಿಎಸ್ ಪಿ ವರಿಷ್ಠೆ ಮಾಯಾವತಿ ಕರೆ
ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಹೆಚ್ಚಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈಅಲಾರ್ಟ್