ಪಿಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಶಾಕಿಂಗ್ ನ್ಯೂಸ್!
545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೂ ಬಿಗ್ ಶಾಕ್ ಕಾದಿದ್ದು, 2020 -21 ನೇ ಸಾಲಿನಲ್ಲಿ ನಡೆದಿದ್ದ ನೇಮಕಾತಿಯನ್ನು ಅಧಿಕೃತವಾಗಿ ರದ್ದುಪಡಿಸಲಾಗಿದೆ.
ಸರ್ಕಾರದ ನೇಮಕಾತಿ ರದ್ದು ಆದೇಶಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಸಿಐಡಿಯಿಂದ ಮಧ್ಯಂತರ ತನಿಖಾ ವರದಿ ಸಲ್ಲಿಕೆಯಾದ ಬೆನ್ನಲ್ಲೇ ವರದಿಯನುಸಾರ ಸರ್ಕಾರ ಪರೀಕ್ಷೆಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ.
ಒಂದೆಡೆ ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರು ಸರ್ಕಾರದ ತಪ್ಪಿಗೆ ನಮಗೇಕೆ ಶಿಕ್ಷೆ? ಎಂದು ಪ್ರಶ್ನಿಸುತ್ತಿದ್ದಾರೆ. ಇದೀಗ ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರು ಕೂಡ ಮರು ಪರೀಕ್ಷೆ ಬರೆಯುವಂತಾಗಿದೆ.
ಕೆಲವರು ಮಾಡಿರುವ ತಪ್ಪಿಗೆ ನಮಗೆ ಶಿಕ್ಷೆಯಾಗುತ್ತಿದೆ. ತಪ್ಪು ಮಾಡಿದವರನ್ನು ತನಿಖೆ ನಡೆಸಿ ಶಿಕ್ಷಿಸಿ, ಸರ್ಕಾರದ ವೈಫಲ್ಯಕ್ಕೆ ನಮಗೆ ಶಿಕ್ಷೆ ನೀಡಿದಂತಾಗಿದೆ ಎಂದು ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪರೋಟ ಸೇವಿಸಿದ ಬಾಲಕನ ದಾರುಣ ಸಾವು: ಪೋಷಕರಿಗೆ ಕಾದಿತ್ತು ಶಾಕಿಂಗ್ ನ್ಯೂಸ್!
ಬೇಸಿಗೆ ಕಾಲದಲ್ಲಿ ಹೆಚ್ಚು ಬೆಳ್ಳುಳ್ಳಿ ಸೇವಿಸಿದರೆ ಏನಾಗುತ್ತದೆ?
ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ವಿರೋಧಿಸಿದ್ದಕ್ಕೆ ರೈಲಿನಿಂದ ಕೆಳಗೆ ಎಸೆದ ಪಾಪಿ!