ಪಿಎಸ್ ಐ ಮರು ಪರೀಕ್ಷೆ ನಿರ್ಧಾರದ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ತಲೆನೋವು!
ಪಿಎಸ್ ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನಲೆಯಲ್ಲಿ ಮರು ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದು ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಪಾಸ್ ಆಗಿರುವ ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಯಾರೋ ಮಾಡಿರುವ ತಪ್ಪಿಗೆ, ನಮಗೆ ಯಾಕೆ ಶಿಕ್ಷೆ ಎಂದು ಅಭ್ಯರ್ಥಿಗಳು ನ್ಯಾಯವಾದ ಪ್ರಶ್ನೆಯನ್ನೇ ಕೇಳುತ್ತಿದ್ದಾರೆ. ಈ ಕುರಿತಂತೆ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಉಪವಾಸ ಕೈಗೊಳ್ಳಲಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ಪಿಎಸ್ ಐ ಎಕ್ಸಾಂನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಪಟ್ಟಂತೆ ಸದ್ಯ ಸಿಐಡಿ ಪೋಲಿಸರ ಬಂಧನದಲ್ಲಿರುವ ಪ್ರಮುಖ ಆರೋಪಿ ದಿವ್ಯ ಹಾಗರಗಿ ಸೇರಿದಂತೆ ಒಟ್ಟು 7 ಮಂದಿಯನ್ನು ಶುಕ್ರವಾರ ಕಲಬುರಗಿ ಜಿಲ್ಲಾ ನ್ಯಾಯಾಲಯದ ಮೂರನೇ ಜೆಎಂಎಫ್ ನ್ಯಾಯಾಧೀಶರು ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.
ಅರ್ಚನ, ಸುನೀತ, ಕಾಳಿದಾಸ್, ಸುನೀತಾ ಪಾಟೀಲ್, ಸುರೇಶ್ ಕಾಟೇಗಾವ್, ಸದ್ದಾಂ, ದಿವ್ಯಾ ಹಾಗರಗಿ, ಆರೋಪಿಗಳನ್ನು ಸಿಐಡಿ ವಶಕ್ಕೆ ನೀಡಲು ನ್ಯಾಯಾಧೀಶರ ಬಳಿ ಸಿಐಡಿ ಪರ ವಕೀಲರು ಮನವಿ ಮಾಡಿಕೊಂಡಿದ್ದರು, ಅದರಂಥೆ ಅವರನ್ನು ವಶಕ್ಕೆ ನೀಡಲು ನ್ಯಾಯಾಧೀಶರು ಮಾನ್ಯ ಮಾಡಿದ್ದಾರೆ.
ಕಲಬುರಗಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರ ಜ್ಞಾನಜ್ಯೋತಿ ಶಾಲೆಯಲ್ಲಿ ಪಿಎಸ್ ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು ಎಂದು ತನಿಖೆ ವೇಳೆ ತಿಳಿದುಬಂದಿತ್ತು. ಬಳಿಕ ದಿವ್ಯಾ ಹಾಗರಗಿ ತಲೆಮರೆಸಿಕೊಂಡಿದ್ದರು. ಸತತ ಹುಡುಕಾಟದ ಬಳಿಕ ಮಹಾರಾಷ್ಟ್ರದ ಪುಣೆಯಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ .
ಪಿಎಸ್ ಐ ಪ್ರಕರಣದಲ್ಲಿ ಅಕ್ರಮ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮರುಪರೀಕ್ಷೆ ನಡೆಸಲು ರಾಜ್ಯಸರ್ಕಾರ ತೀರ್ಮಾನಿಸಿದೆ. ಕೆಲವರು ಮಾಡಿರುವ ತಪ್ಪಿಗೆ ಇದೀಗ ಕಷ್ಟಪಟ್ಟು ಪರೀಕ್ಷೆ ಬರೆದ ಅಷ್ಟೂ ಮಂದಿ ವಾಪಸ್ ಪರೀಕ್ಷೆ ಬರೆದು ಪಾಸ್ ಆಗಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ರಾಜ್ಯ ಸರ್ಕಾರದ ವಿರುದ್ಧ ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಗಲಭೆ ಪ್ರಕರಣ: ಆತ್ಮಹತ್ಯೆಗೆ ಯತ್ನಿಸಿದ ಓರ್ವ ಆರೋಪಿ
ವಾಟ್ಸಾಪ್ ನಲ್ಲಿ ಕ್ಯಾಶ್ ಬ್ಯಾಕ್ ಸಿಗಬೇಕಾದರೆ ಏನು ಮಾಡಬೇಕು ಗೊತ್ತಾ?
ಊಟ ನಿರಾಕರಣೆ, ಏಸಿ ಇಲ್ಲದೇ ಚಡಪಡಿಸಿದ ದಿವ್ಯಾ ಹಾಗರಗಿ!