ಮಹಿಳೆಯನ್ನು ಕೊಂದು ಮೃತದೇಹದ ಜೊತೆ ಫೇಸ್ ಬುಕ್ ಲೈವ್ ಗೆ ಬಂದ ಪಾಗಲ್ ಪ್ರೇಮಿ - Mahanayaka
6:03 PM Wednesday 11 - December 2024

ಮಹಿಳೆಯನ್ನು ಕೊಂದು ಮೃತದೇಹದ ಜೊತೆ ಫೇಸ್ ಬುಕ್ ಲೈವ್ ಗೆ ಬಂದ ಪಾಗಲ್ ಪ್ರೇಮಿ

muniraj laxmi
22/02/2023

ಚಾಮರಾಜನಗರ: ಮಹಿಳೆಯೊಬ್ಬಳನ್ನು ಕಲ್ಲು ಎತ್ಹಾಕಿ ಕೊಲೆ ಮಾಡಿದ ವ್ಯಕ್ತಿಯೋರ್ವ ತಾನು ಕೂಡ ಸಾವಿಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಗಮಲೆ ಗ್ರಾಮದಲ್ಲಿ ನಡೆದಿದೆ.

ಹನೂರು ತಾಲೂಕಿನ ನಾಗಮಲೆ ಗ್ರಾಮದ ಲಕ್ಷ್ಮೀ( 35) ಮೃತ ದುರ್ದೈವಿ. ತಮಿಳುನಾಡಿನ‌ ಧರ್ಮಪುರಿ ಜಿಲ್ಲೆಯ ಮುನಿರಾಜ್ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಲಕ್ಷ್ಮೀ ಮೂಲತಃ ತಮಿಳುನಾಡಿನ ಪೆನ್ನಾಗರಂ ನಿವಾಸಿ ಲಕ್ಷ್ಮೀಯನ್ನು ಕಳೆದ 7 ತಿಂಗಳ ಹಿಂದೆ ನಾಗಮಲೆ ಗ್ರಾಮದ ರಮೇಶ್ ಎಂಬಾತ ವಿವಾಹ ಮಾಡಿಕೊಂಡು ನಾಗಮಲೆಗೆ ಕರೆತಂದಿದ್ದ.

ಮಂಗಳವಾರ ರಮೇಶ್ ಬೇರೆ ಊರಿಗೆ ಹೋಗಿದ್ದ ವೇಳೆ ಎಂಟ್ರಿ ಕೊಟ್ಟ ಮುನಿರಾಜು ಲಕ್ಷ್ಮಿಯನ್ನು ಕೊಂದು ತಾನೂ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನು, ಲಕ್ಷ್ಮೀಯನ್ನು ಕೊಲೆ ಮಾಡಿ ಫೇಸ್ ಬುಕ್ ಲೈವ್ ಮಾಡಿರುವ ಪಾಗಲ್ ಪ್ರಿಯಕರ ತನ್ನನ್ನು ಕೊಲೆಗಾರನನ್ನಾಗಿಸಿದೆಯಲ್ಲಾ ಲಕ್ಷ್ಮೀ, ತಾನೇ ನಿನ್ನನ್ನು ಕೊಲೆ ಮಾಡಿದೆನ್ನಲ್ಲಾ, ನಿನ್ನ ರಕ್ತವನ್ನು ಕಾಣಲು ನನ್ನಲ್ಲಾಗುತ್ತಿಲ್ಲ ಎಂದು ಅಳುತ್ತಾ ವೀಡಿಯೋ ಮಾಡಿದ್ದಾನೆ.

ಮೇಲ್ನೋಟಕ್ಕೆ ವಿವಾಹೇತರ ಸಂಬಂಧವೇ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ.  ಮಲೆಮಹದೇಶ್ವರ ಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ