“ಗದ್ದೆ ನೋಡಲು ಹೋಗೋಣ ಬಾ” ಎಂದು ಪತ್ನಿಯನ್ನು ಕರೆದೊಯ್ದು ಹತ್ಯೆ ಮಾಡಿದವನಿಗೆ ಜೀವಾವಧಿ ಶಿಕ್ಷೆ
	
	
	
	
	
ಚಾಮರಾಜನಗರ: ಪತ್ನಿಯನ್ನು ಬಾವಿಗೆ ತಳ್ಳಿ ಹತ್ಯೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೊಳ್ಳೇಗಾಲ ಅಪರ ಜಿಲ್ಲಾ ನ್ಯಾಯಾಲಯವು ಆದೇಶಿಸಿದೆ. 2017 ರ ಫೆಬ್ರವರಿ 22ರಂದು ನಡೆದ ಹತ್ಯೆ ಪ್ರಕರಣವನ್ನು ವಿಚಾರಣೆ ನಡೆಸಿದ ಕೋರ್ಟ್, ಆರೋಪಿಯು ಅಪರಾಧ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ ಹಾಗೂ 45 ಸಾವಿರ ರೂಪಾಯಿ ದಂಡ ವಿಧಿಸಿದೆ.
ವರದಕ್ಷಿಣೆ ಕೊಡಲಿಲ್ಲ ಎಂದು, ವಿವಾಹವಾದ ಕೆಲವೇ ದಿನಗಳಲ್ಲಿ, “ಗದ್ದೆ ನೋಡಲು ಹೋಗೋಣ ಬಾ” ಎಂದು ಪತ್ನಿಯನ್ನು ಕರೆದೊಯ್ದ ಚಾಮರಾಜನಗರ ತಾಲೂಕಿನ ನಾಗವಳ್ಳಿ ಗ್ರಾಮದ ವೆಂಕಟೇಶ್, ಅಲ್ಲಿದ್ದ ಬಾವಿಗೆ ತಳ್ಳಿ ಹತ್ಯೆ ಮಾಡಿದ್ದ. ಈ ಸಂಬಂಧ ಮೃತಳ ತಾಯಿ ಸಾವಿತ್ರಮ್ಮ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ವೃತ್ತಿಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿದ್ದ ವೆಂಕಟೇಶ್, ಕೊಳ್ಳೇಗಾಲ ತಾಲೂಕಿನ ಧನಗೆರೆ ಗ್ರಾಮದ ಸಾವಿತ್ರಮ್ಮರವರ ಪುತ್ರಿ ದಿವ್ಯಾರನ್ನು 2017ರ ಫೆಬ್ರವರಿ 2ರಂದು ವಿವಾಹ ಮಾಡಿಕೊಂಡಿದ್ದ. ಮದುವೆಗೂ ಮುನ್ನ ಹುಡುಗಿಗೆ ಮಾಂಗಲ್ಯ ಸರ, ಹುಡುಗನಿಗೆ ಚಿನ್ನದ ಉಂಗುರ, 2.5 ಲಕ್ಷ ವರದಕ್ಷಿಣೆ ಕೊಡಲು ಒಪ್ಪಂದ ಮಾಡಿಕೊಂಡು ಅದರಂತೆ ವಿವಾಹಕ್ಕೂ ಮುನ್ನ ಮದುಮಗನಿಗೆ 2 ಲಕ್ಷ ಹಣ, ಚಿನ್ನದ ಉಂಗುರ ನೀಡಲಾಗಿತ್ತು. ಉಳಿದ ಹಣ ಸಿಗಲಿಲ್ಲ ಎಂದು ವೆಂಕಟೇಶ್ ತನ್ನ ಪತ್ನಿಯನ್ನೇ ಹತ್ಯೆ ಮಾಡಿದ್ದ.
ಈ ಪ್ರಕರಣವನ್ನು ವಿಚಾರಣೆ ನಡೆಸಿದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಅಪರ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಲೋಕಪ್ಪ ಜೀವಾವಧಿ ಶಿಕ್ಷೆ ವಿಧಿಸಲು ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕರಾಗಿ ಉಷಾ ವಾದ ಮಂಡಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ಸೆ.27ರಂದು ಭಾರತ ಬಂದ್: ಈ ಬಾರಿ ಬಂದ್ ತೀವ್ರ ರೀತಿಯಲ್ಲಿ ನಡೆಯಲಿದೆ | ಕೋಡಿಹಳ್ಳಿ ಚಂದ್ರಶೇಖರ್
“ಮುಂದಿನ ದಿನಗಳಲ್ಲಿ ವಿಧಾನಸಭೆಯ ಸಭಾಂಗಣವನ್ನು ಮದುವೆ, ಮುಂಜಿಗೂ ಬಾಡಿಗೆಗೆ ಕೊಡಬಹುದು”
ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ: 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ | ಆರೋಪಿ ಅರೆಸ್ಟ್
ಅಸ್ಪೃಶ್ಯತೆ ಜೀವಂತವಿದೆ ಎನ್ನುವುದನ್ನು ಒಪ್ಪಿಕೊಂಡು ಬದಲಾವಣೆಗೆ ಶ್ರಮಿಸಬೇಕು | ಡಿವೈಎಸ್ ಪಿ ರಮೇಶ್
ಎಗ್ ರೈಸ್, ಗೋಬಿ ಮಂಚೂರಿ ಆಸೆ ತೋರಿಸಿ ಬಾಲಕಿಯನ್ನು ಅತ್ಯಾಚಾರ ನಡೆಸಿದ್ದ ಕಾಮುಕ ಅರೆಸ್ಟ್!
ಸುಳ್ಳು ಜಾತಿ ಪ್ರಮಾಣ ಪತ್ರ: ತಹಶೀಲ್ದಾರ್ ಸೇರಿದಂತೆ ಐವರ ವಿರುದ್ಧ ಎಫ್ ಐಆರ್




























